Breaking News

JDSನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವ: ಸಿದ್ದರಾಮಯ್ಯ

Spread the love

ಹುಬ್ಬಳ್ಳಿ: ಜೆಡಿಎಸ್​ನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವದ ಸಂಗತಿ.

ಮಾಜಿ ಪ್ರಧಾನಿ ದೇವೇಗೌಡ ಅವರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌ ಎಂದಿದ್ದರು. ಆದರೆ ಇದೀಗ ಬಿಜೆಪಿಯವರ ಜೊತೆ ಸೇರಿ‌ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್​ನವರು ಸೇರಿಕೊಳ್ಳುತ್ತಾರೆ ಎಂಬುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಜೆಡಿಎಸ್​ನ ಬಿಜೆಪಿಯ ‘ಬಿಟೀಂ‌’ ಅಂತಿದ್ದೆ ಅದಕ್ಕೆ ಅವರು ಕೋಪಿಸಿಕೊಳ್ಳುತ್ತಿದ್ದರು. ಈಗ ಜ್ಯಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರಿಕೊಂಡಿದ್ದಾರೆ. ದೇವೇಗೌಡರು ಯಾರೊಂದಿಗೂ ಸೇರಿಕೊಳ್ಳಲ್ಲ ಅಂತ ಪಕ್ಷದ ಉಳಿವಿಗಾಗಿ ಸೇರಿಕೊಂಡ್ವಿ ಅಂತಾರೆ.‌ ಅಧಿಕಾರಕ್ಕಾಗಿ ಏನೆಲ್ಲಾ ಮಾಡುತ್ತಾರೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಟೀಕಿಸಿದರು.

ಜಿ 20ಗೆ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಆಹ್ವಾನ ಮಾಡದಿರುವ ವಿಚಾರವಾಗಿ ಮಾತನಾಡಿದ ಅವರು, ವಿಪಕ್ಷ ನಾಯಕರನ್ನ ಆಹ್ವಾನ‌ ಮಾಡದಿರುವುದು ತಪ್ಪು. ಅಧಿಕೃತವಾಗಿ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಬೇಕಿತ್ತು. ಆದರೆ ಜಿ20 ಸಭೆಗೆ ನ ಕರಿದಿಲ್ಲ. ಕರಿಯುತ್ತಿದ್ದರೆ ಹೋಗುತ್ತಿದೆ. ಕೇವಲ ಊಟಕ್ಕೆ ಕರೆದಿದ್ದರಿಂದ ನಾನು ಹೋಗುವದಿಲ್ಲ, ನಾನು ಜಿ.20 ಸದಸ್ಯ ಅಲ್ಲ, ಎಂದು ಸ್ವಲ್ಪ ಖಾರವಾಗಿ ನುಡಿದರು.

ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ. ಗುಜರಾತ್ ಸಿಎಂ ಆಗಿ ನರೇಂದ್ರ ಮೋದಿಯವರು ಮುಂದೆ ಪ್ರಧಾನಿಯಾಗಿದ್ದಾರೆ. ನನ್ನ ಅಭಿಮಾನಿಗಳಿಗೆ ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕೆಂಬ ಅಪೇಕ್ಷೆ ಇದೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

ಮಹದಾಯಿ ವಿಚಾರವಾಗಿ ಪ್ರತಿಕ್ರಿಯೆ ‌ನೀಡಿದ ಅವರು, ಕೇಂದ್ರ ಸರ್ಕಾರ ಅರಣ್ಯ ಮತ್ತು ಎನ್ವರಾಂಮೆಂಟ್​ ಕ್ಲಿಯರೆನ್ಸ್ ಕಳಿಸಿಲ್ಲ. ಮೊದಲು ಕೇಂದ್ರ ಸರ್ಕಾರ ಕ್ಲಿಯರೆನ್ಸ್ ಕಳಿಸಲಿ. ನಾವು ಪ್ರಧಾನಿಯವರಿಗೆ ಸಮಯ ಕೇಳಿದ್ದೇವೆ. ಮಹದಾಯಿ, ಕೃಷ್ಣಾ,‌ ಕಾವೇರಿ‌ ಸೇರಿದಂತೆ ಹಲವು ವಿಚಾರದ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೇನೆ. ನಿಯೋಗದೊಂದಿಗೆ ಬರುತ್ತೇವೆ ಅಂತಾ ಪ್ರಧಾನಿಗೆ ಪತ್ರ ಬರೆದಿದ್ದೇವೆ. ಆದರೆ ಈವರೆಗೂ ಅವರಿಂದ ಉತ್ತರ ಬಂದಿಲ್ಲ ಎಂದರು.


Spread the love

About Laxminews 24x7

Check Also

ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ ವಿಪಕ್ಷ ಉಪನಾಯಕ ಬೆಲ್ಲದ.

Spread the love ಧಾರವಾಡ ನೆಹರು ನಗರದ ಕೊಳಚೆ ಪ್ರದೇಶದ 121 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ.. ಹಕ್ಕುಪತ್ರ ಫಲಾನುಭವಿಗಳಿಗೆ ಹಸ್ತಾಂತರಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ