Breaking News

ಲಿಫ್ಟ್ ಕೊಡುವ ನೆಪದಲ್ಲಿ ದರೋಡೆ.. ಕಾಮಾಕ್ಷಿಪಾಳ್ಯ ಪೊಲೀಸರಿಂದ ಔಟರ್ ರಿಂಗ್ ರೋಡ್ ರಾಬರ್ಸ್ ಬಂಧನ

Spread the love

ಬೆಂಗಳೂರು: ಲಿಫ್ಟ್ ಕೊಡುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ‌.

ನಂಜುಂಡ, ಗಿರೀಶ್ ಹಾಗೂ ನವೀನ್ ಬಂಧಿತ ಆರೋಪಿಗಳು. ಗೊರಗುಂಟೆಪಾಳ್ಯ – ನಾಯಂಡಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಕೃತ್ಯ ಎಸಗುತ್ತಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಚಾಲಕ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು ರಾತ್ರಿ ವೇಳೆ ಬಸ್ಸಿಗಾಗಿ ಕಾಯುವವರನ್ನು ಗುರಿಯಾಗಿಸಿಕೊಂಡು ‘ಲಿಫ್ಟ್ ಕೊಡುವುದಾಗಿ’ ಕಾರು ಹತ್ತಿಸಿಕೊಳ್ಳುತ್ತಿದ್ದರು. ಸ್ವಲ್ಪ ದೂರ ಹೋಗುತ್ತಿದ್ದಂತೆ ಹಿಂಬದಿ ಸೀಟಿನಲ್ಲಿದ್ದ ಇನ್ನಿಬ್ಬರು ಆರೋಪಿಗಳು ಕತ್ತಿನ ಬಳಿ ಡ್ರ್ಯಾಗರ್ ಇಟ್ಟು ಬೆದರಿಸುತ್ತಿದ್ದರು. ಬೆದರಿಸುವಾಗ ಪ್ರಯಾಣಿಕರು ಕಿರುಚಿದರೆ ಯಾರಿಗೂ ತಿಳಿಯಬಾರದು ಎಂದು ಮ್ಯೂಸಿಕ್ ಸಿಸ್ಟಂ ಸೌಂಡ್ ಹೆಚ್ಚಿಸುತ್ತಿದ್ದರು.

 ಆರೋಪಿಗಳಿಂದ ವಶಕ್ಕೆ ಪಡೆದ ದರೋಡೆಗೊಂಡಿದ್ದ ವಸ್ತುಗಳು ಹಾಗು ಕೃತ್ಯಕ್ಕೆ ಬಳಸುತ್ತಿದ್ದ ಕಾರುನಂತರ ಪ್ರಯಾಣಿಕನ ಜೇಬಿನಲ್ಲಿರುವ ಹಣ ಮಾತ್ರವಲ್ಲದೇ ಗೂಗಲ್ ಪೇ, ಫೋನ್ ಪೇ ಮೂಲಕವೂ ಹಣ ವರ್ಗಾವಣೆ ಮಾಡಿಕೊಂಡು ಮೊಬೈಲ್ ಫೋನ್ ಕಸಿದುಕೊಂಡು ಕಾರಿನಿಂದ ಇಳಿಸಿ ಪರಾರಿಯಾಗುತ್ತಿದ್ದರು.

ಎಲ್ಲೋ ಬೋರ್ಡ್ ಕಾರನ್ನು ಬಳಸಿಕೊಂಡು ಗೊರಗುಂಟೆಪಾಳ್ಯ ಸಿಗ್ನಲ್‌, ಸುಮ್ಮನಹಳ್ಳಿ ಮತ್ತು ಅನ್ನಪೂರ್ಣೇಶ್ವರಿ ನಗರದಲ್ಲಿ ಮೂರು ದಿನ ಮೂರು ಕೃತ್ಯ ಎಸಗಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ವಿಶೇಷ ಕಾರ್ಯಾಚರಣೆ ಕೈಗೊಂಡ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ