Breaking News

ಬಸವತತ್ವ ಪ್ರಚಾರಕ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ

Spread the love

ಬೆಳಗಾವಿ: ಬಸವತತ್ವ ಪ್ರಚಾರಕ ಮತ್ತು ತಮ್ಮ ಪ್ರವಚನಗಳ ಮೂಲಕ ರಾಜ್ಯದಲ್ಲಿ ಖ್ಯಾತಿ ಗಳಿಸಿರುವ ಚನ್ನಮ್ಮ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪದ‌ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ ಕಳುಹಿಸಲಾಗಿದೆ.

ಆಗಸ್ಟ್ 8 ರಂದು ಈ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ವಾಮೀಜಿಗೆ 2020ರಿಂದ ಈವರೆಗೆ 5ಕ್ಕೂ ಹೆಚ್ಚು ಜೀವ ಬೆದರಿಕೆ ಪತ್ರಗಳು ಬಂದಿದೆ.

ಬೆದರಿಕೆ ಪತ್ರ: ಓಂ‌ ಶ್ರೀ ಕಾಳಿಕಾದೇವಿ ನಮಃ ಓಂ ಶ್ರೀ ಕಾಳಿಕಾದೇವಿ ನಮಃ ಎಂದು ಆರಂಭಿಸಿ, ಸಾವು 2020ರಲ್ಲಿ ತಪ್ಪಿರಬಹುದು. 2023ರಲ್ಲಿ ತಪ್ಪುವುದಿಲ್ಲ. ನಮ್ಮ ಧರ್ಮ ದೇವತೆಗಳನ್ನು ನಿಂದಿಸುವ ನಿನಗೆ ಘೋರವಾದ ಹತ್ಯೆಯೇ ಬರುತ್ತೆ. ಅಂತಿಮ ದಿನಗಳು ಪ್ರಾರಂಭವಾಗಿವೆ. ಓಂ ಶ್ರೀ ಕಾಳಿಕಾದೇವಿ ನಮಃ ಓಂ ಶ್ರೀ ಕಾಳಿಕಾದೇವಿ ನಮಃ ಸಹಿಷ್ಣು ಹಿಂದೂ ಎಂದು ಪತ್ರದಲ್ಲಿ ಬರೆಯಲಾಗಿದೆ.

ಸಮಾಜಕ್ಕೆ ನನ್ನ ಸೇವೆ ನಿಂತು ಹೋಗಬಾರದು: ಬೆದರಿಕೆ ಪತ್ರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನಿಜಗುಣಾನಂದ ಸ್ವಾಮೀಜಿ, ಒಬ್ಬನೇ ವ್ಯಕ್ತಿ ನನಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದಾನೆ. ಒಂದೇ ಹಸ್ತಾಕ್ಷರ ಇದೆ, ಹೆಸರು ಇಲ್ಲ, ದ್ವೇಷದ ಉದ್ದೇಶ ಇಲ್ಲ. ಸೈದ್ಧಾಂತಿಕ ಹೋರಾಟದ ಬಗ್ಗೆ ದ್ವೇಷ ಇಟ್ಟುಕೊಂಡು ಪತ್ರ ಬರೆಯುತ್ತಿದ್ದಾನೆ. 15 ದಿನಗಳ ಹಿಂದೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದೆ. ಜೀವ ಬೆದರಿಕೆ ಪತ್ರ ಸಂಬಂಧ ಕಿತ್ತೂರು ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಹೇಳಿದರು.

ಚಿತ್ರದುರ್ಗ, ದಾವಣಗೆರೆ ಹೀಗೆ ಬೇರೆ ಬೇರೆ ಕಡೆಗಳಿಂದ ಪತ್ರಗಳು ಬರುತ್ತಿವೆ. ಸಾವಿನ ಬಗ್ಗೆ ನನಗೆ ಯಾವುದೇ ಭಯವಿಲ್ಲ. ಆದರೆ ಸಮಾಜಕ್ಕೆ ನಮ್ಮ ಸೇವೆ ನಿಂತು ಹೋಗುತ್ತೆ ಎಂಬ ಚಿಂತೆ ನನ್ನನ್ನು ಕಾಡುತ್ತಿದೆ. ಸರ್ಕಾರ ಆದಷ್ಟು ಬೇಗ ಇದರ ಹಿಂದಿದ್ದವರನ್ನು ಪತ್ತೆ ಹಚ್ಚಬೇಕು. ರಾಜ್ಯದಲ್ಲಿ ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆಯಾಗಿದೆ. ಈಗ ಕೊಲೆ ಬೆದರಿಕೆ ಬರುತ್ತಿರುವುದರಿಂದ ನನ್ನಲ್ಲಿ ಆತಂಕ ಹುಟ್ಟಿಸಿದೆ. ಕ್ಷೇತ್ರದ ಶಾಸಕರು ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಸರ್ಕಾರಕ್ಕೆ ನಾನು ಮನವಿ ಮಾಡುವುದಿಲ್ಲ, ಇದು ಸರ್ಕಾರದ ಕೆಲಸ. ನಾನು ಒಬ್ಬನೇ ಮಠದಲ್ಲಿ ಇರುತ್ತೇನೆ, ಹೀಗಾಗಿ ಆತಂಕ ಶುರುವಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ