Breaking News
Home / ರಾಜಕೀಯ / ಮೇಕ್ ಇನ್​ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ ‘ಇಂಡಿಯಾ’ ಹೆಸರಿಗೆ ಬೆಚ್ಚಿಬಿದ್ದಿದ್ದಾರೆ: ಸಿಎಂ

ಮೇಕ್ ಇನ್​ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ ‘ಇಂಡಿಯಾ’ ಹೆಸರಿಗೆ ಬೆಚ್ಚಿಬಿದ್ದಿದ್ದಾರೆ: ಸಿಎಂ

Spread the love

ಬೆಂಗಳೂರು: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ.

ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ ಎಂದು ಎಚ್ಚರಿಸಿದರು.

ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರದೊಂದಿಗೆ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿಯ ಕೇಂದ್ರ ಸರ್ಕಾರವೇ ಈಗ “INDIA” ಹೆಸರಿಗೆ ಬೆಚ್ಚಿಬಿದ್ದು ದೇಶದ ಹೆಸರು “ಭಾರತ” ಎಂದು ಹೊಸದಾಗಿ ಹೇಳಲು ಹೊರಟಿದೆ. ನಾವು ಭಾರತ್ ಜೋಡೋ ನಡೆಸಿದವರು. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ. ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಭಾರತೀಯ ಬಹುತ್ವ ಸಂಸ್ಕೃತಿ ಕಾಂಗ್ರೆಸ್ ಕೈಯಲ್ಲಿ ಸುಭದ್ರವಾಗಿದೆ. ಭಾರತೀಯ ಸಂವಿಧಾನ ನಮ್ಮ ಕೈಯಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೇ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ. ಭಾರತೀಯರು ಭಯಮುಕ್ತರಾಗಿ ಅಭಿವೃದ್ಧಿ ಭಾರತವನ್ನು ಮುನ್ನಡೆಸಲು ಸನ್ನದ್ಧರಾಗಿ ಎಂದು ಕರೆ ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ