ಚಿಕ್ಕೋಡಿ(ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದು ಪಕ್ಷಾತೀತವಾಗಿ ಹೋರಾಟ ಮಾಡಿದ್ದೇವೆ. ಸಮಾಜದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಮಂತ್ರಿಯಾಗಿದ್ದೇನೆ.
ಈಗ ಸಮಾಜ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಅವಕಾಶ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಿಪ್ಪಾಣಿಯಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿ, ಸರ್ಕಾರ ಪರವಾಗಿ ಮನವಿ ಪತ್ರವನ್ನು ಸ್ವೀಕರಿಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ನಿನ್ನೆ ಮುಖ್ಯಮಂತ್ರಿಗಳ ಬಳಿ ಈ ಬಗ್ಗೆ ಮಾತನಾಡಿದ್ದೇನೆ, ಪಂಚಮಸಾಲಿ ಸಮಾಜದ ಮೀಸಲಾತಿ ಸಂಬಂಧ ಮನವಿ ಸ್ವೀಕರಿಸಲು ಬಂದಿದ್ದೇನೆ. ಸರ್ಕಾರದ ಪರವಾಗಿ ನಾನು ಮನವಿ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಅವರಿಗೆ ತಿಳಿಸಿದ್ದೆ.
ಅವರು ಹೋಗಿ ಬನ್ನಿ ಎಂದು ಹೇಳಿದ್ದರು. ನಾಳೆ ಮೀಟಿಂಗ್ ಇರುವುದರಿಂದ ಮೀಸಲಾತಿ ವಿಚಾರ ಚರ್ಚೆ ಮಾಡಲಾಗುವುದು. ಈ ಹಿಂದೆ ಸಮಾಜದ ಮುಖಂಡರ ನಿಯೋಗ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿ ಸಮಾಜದ ವಾದವನ್ನು ಮಂಡಿಸಿದೆ, ಅದನ್ನು ಆಸಕ್ತಿಯಿಂದ ಇಬ್ಬರು ಕೇಳಿದ್ದಾರೆ