Breaking News

ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ಖಂಡನೀಯ.:ರಮೇಶ ಜಾರಕಿಹೊಳಿ

Spread the love

ಬೆಂಗಳೂರು –  ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು ಎಂದು ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ  ಎಂದಿದ್ದಾರೆ.
ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಮೇಲೆ ಈ ರೀತಿಯ ದಾಳಿಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು. ಅರ್ನಬ್ ಗೋಸ್ವಾಮಿ ಬಂಧನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಅರ್ನಬ್ ಬಂಧನಕ್ಕೆ 2018ರ ತಾಯಿ -ಮಗನ ಆತ್ಮಹತ್ಯೆ ಪ್ರಕರಣ ಕಾರಣ

Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ