Breaking News

ಸೋಮವಾರ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲತೆಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್​ ಪ್ರಯಾಣದಶಕ್ತಿ ಯೋಜನೆಯನ್ನು ಖಾಸಗಿ ಬಸ್​ಗಳಿಗೂ ವಿಸ್ತರಣೆ ಮಾಡಬೇಕು ಹಾಗೂ ರಸ್ತೆ ತೆರಿಗೆ ರದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆಗಳ ಒಕ್ಕೂಟ ಸೋಮವಾರ ಬೆಂಗಳೂರು ಬಂದ್ ಕರೆ ನೀಡಿದೆ.

ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವ ಬಿಎಂಟಿಸಿ ಹೆಚ್ಚುವರಿ ಬಸ್​​ಗಳ ಜೊತೆಗೆ ಟ್ರಿಪ್​ ಸಂಖ್ಯೆಯಲ್ಲೂ ಏರಿಕೆ ಮಾಡಲು ಸಿದ್ಧತೆ ನಡೆಸಿದೆ.

ನಾಳೆ ನಡೆಯುತ್ತಿರುವ ಬೆಂಗಳೂರು ಬಂದ್​​ಗೆ ಆಟೋ, ಖಾಸಗಿ ಬಸ್, ಕ್ಯಾಬ್ ಸೇರಿದಂತೆ ಪ್ರಯಾಣಿಕ ಆಧಾರಿತ ಸೇವೆಯಲ್ಲಿ ವ್ಯತ್ಯಯ ಆಗಲಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುವ ಸಾಧ್ಯತೆಯಿದೆ‌. ಈ ದಿಸೆಯಲ್ಲಿ ಬಿಎಂಟಿಸಿಯು ಇಂದು ಮಧ್ಯರಾತ್ರಿಯಿಂದ ನಾಳೆ ರಾತ್ರಿವರೆಗೂ ಹೆಚ್ಚುವರಿ ಬಸ್ ಓಡಿಸಲು ನಿರ್ಧರಿಸಿದೆ.

ಬೆಂಗಳೂರು ನಗರ ಹಾಗೂ ಹೊರವಲಯದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿದಿನ 5,601 ಬಸ್​​ಗಳಿಂದ 57,450 ಟ್ರಿಪ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ, ಇಂದು ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಖಾಸಗಿ ಆಟೋ, ಟ್ಯಾಕ್ಸಿ ಮತ್ತು ವಾಹನಗಳ ಚಾಲಕರ ಒಕ್ಕೂಟವು ತಮ್ಮ ವಿವಿಧ ಬೇಡಿಕಗಳ ಈಡೇರಿಕೆಗಾಗಿ ಬಂದ್ ಕರೆ ನೀಡಿರುವ ಹಿನ್ನೆಲೆ ಹೆಚ್ಚುವರಿ ಬಸ್ ಸೇವೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ