Breaking News

ನೈಜ ಘಟನೆಯ ‘ದೈಜಿ’ ಚಿತ್ರದಲ್ಲಿ ಬಹುಭಾಷಾ ನಟ ರಮೇಶ್ ಅರವಿಂದ್

Spread the love

ನ್ನಡ ಸೇರಿ ತಮಿಳು, ತೆಲುಗು, ಮಲಯಾಳಂನಲ್ಲೂ ನಟಿಸಿರುವ ಬಹುಭಾಷಾ ನಟ ರಮೇಶ್ ಅರವಿಂದ್ ಅವರು ದೈಜಿ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಶಿವಾಜಿ ಸುರತ್ಕಲ್ ಭಾಗ 1 ಮತ್ತು 2 ಸಿನಿಮಾಗಳ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸುತ್ತಿದ್ದಾರೆ.

ಚಿತ್ರದ ಶೀರ್ಷಿಕೆಯನ್ನು ‘ದೈಜಿ’ ಎಂದು ಇಡಲಾಗಿದ್ದು, ಇದಕ್ಕೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ ದೈಜಿ ಎಂದರೆ ರಕ್ತ ಸಂಬಂಧ, ಜಪಾನಿ ಭಾಷೆಯಲ್ಲಿ ದೈಜಿ ಎಂದರೆ ಬಹಳ ಕಾಳಜಿ ವಹಿಸಬೇಕಾದ ವಿಚಾರ ಎಂಬರ್ಥಗಳಿವೆ.

ಈ ಸಿನಿಮಾವು ಒಂದು ಸಾರ್ವತ್ರಿಕ ನೆಲೆ ಕಂಡುಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂಬುದು ಚಿತ್ರತಂಡದ ಬಲವಾದ ನಂಬಿಕೆ. ನಿರ್ಮಾಪಕ ರವಿ ಕಶ್ಯಪ್ ವಿವರಿಸಿದ ನೈಜ ಘಟನೆಗಳನ್ನು ಆಧರಿಸಿ ಚಿತ್ರಕಥೆಯನ್ನು ಶಿವಾಜಿ ಸುರತ್ಕಲ್ ಬರೆದ ಅಭಿಜಿತ್ ವೈ ಆರ್ ಮತ್ತು ಆಕಾಶ್ ಶ್ರೀವತ್ಸ ಅವರೇ ಬರೆದಿದ್ದಾರೆ.

ಚಿತ್ರದ ನಾಯಕಿಗೆ ಈಗಾಗಲೇ ಹುಡುಕಾಟ ಪ್ರಾರಂಭವಾಗಿದೆ. ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ಶೂಟಿಂಗ್​ ಪ್ರಾರಂಭವಾಗಲಿದೆ. ಸಿನಿಮಾವು ಸಂಪೂರ್ಣವಾಗಿ ಅಮೆರಿಕದಲ್ಲಿ ಚಿತ್ರೀಕರಣವಾಗಲಿದೆ. ಇತ್ತೀಚೆಗಷ್ಟೇ 25 ವರ್ಷಗಳ ಸಂಭ್ರಮ ಆಚರಿಸಿದ ‘ಅಮೆರಿಕ ಅಮೆರಿಕ’ ಚಿತ್ರದಂತೆಯೇ ಇದೂ ಕೂಡ ಬಹುತೇಕ ಅಮೆರಿಕದಲ್ಲಿಯೇ ನಡೆಯುವ ಕಥೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ