Breaking News

ಹಾಸನದಲ್ಲಿ ಮತ್ತೆ ಗುಂಡಿನ ಸದ್ದು- ರೌಡಿ ಶೀಟರ್ ಸುನೀಲ್ ಮೇಲೆ ಫೈರಿಂಗ್

Spread the love

ಹಾಸನ: ಜಿಲ್ಲೆಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿ ಪೊಲೀಸರು ಬಂಧಿಸಿದ್ದಾರೆ.

ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂವರು ಯುವಕರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿ ಸುನೀಲ್ ಹಾಸನ ಗ್ರಾಮಾಂತರ ಪಿಎಸ್‍ಐ ಸುರೇಶ್‍ಗೆ ಚೂರಿ ಇರಿದಿದ್ದಾನೆ. ನಂತರ ಹೆದರಿಸಿ, ಪರಿಸ್ಥಿತಿ ನಿಯಂತ್ರಿಸಲು ಸಿಪಿಐ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಏರ್ ಫೈರ್ ಬಳಿಕವೂ ಆರೋಪಿಗಳು ದಾಳಿಮಾಡಲು ಮುಂದಾಗಿದ್ದಾರೆ. ಹೀಗಾಗಿ ಸುನೀಲ್ ಮೇಲೆ ಗುಂಡು ಹಾರಿಸಿದ್ದಾರೆ.

ಸುನಿಲ್ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಹೀಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ರೌಡಿ ಶೀಟರ್ ಸುನೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳು ಪಿಎಸ್ ಐ ಹಾಗೂ ಗುಂಡೇಟು ಬಿದ್ದ ರೌಡಿ ಶೀಟರ್‍ನನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಎಸ್‍ಪಿ ಶ್ರೀನಿವಾಸ್ ಗೌಡ ಭೇಟಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ