ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು, ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವಿಟರ್ ನಲ್ಲಿ ಟೀಕಿಸಿದ್ದಾರೆ.
ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಇದಕ್ಕೆ ದಿನೇಶ್ ಗುಂಡೂರಾವ್ ಟ್ವಿಟ್ ಮೂಲಕ ತಿರುಗೇಟು ನೀಡಿದ್ದಾರೆ.
ಅರ್ನಬ್ ಗೋಸ್ವಾಮಿ ಬಂಧನ ಜೈ ಶಂಕರ್ ಅವರಿಗೆ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂಬುದಾದರೆ, ಅವರದ್ದೇ ಪಕ್ಷದ ಕರ್ನಾಟಕದ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಪ್ರಶ್ನಿಸಿದ್ದಾರೆ.
Laxmi News 24×7