Breaking News

ಡೀಸೆಲ್ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವರದಿ: ಸ್ಪಷ್ಟನೆ ನೀಡಿದ ನಿತಿನ್ ಗಡ್ಕರಿ

Spread the love

ನವದೆಹಲಿ: ”ವಾಯು ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್​ಸೆಟ್‌ಗಳ (ಡೀಸೆಲ್ ಜನರೇಟರ್) ಮೇಲೆ ‘ಮಾಲಿನ್ಯ ತೆರಿಗೆ’ ರೂಪದಲ್ಲಿ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವಿಧಿಸಲು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಲಾಗುತ್ತದೆ” ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂಬುವುದು ವರದಿಯಾಗಿದೆ.

ಈ ಕುರಿತು ಖುದ್ದು ಸಚಿವರೇ ಸ್ಪಷ್ಟನೆ ಕೊಟ್ಟಿದ್ದು, ಇಂತಹ ಯಾವುದೇ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು ನಡೆದ ಭಾರತೀಯ ಆಟೋಮೊಬೈಲ್ ತಯಾರಕರ ಸಂಘದ (ಎಸ್​ಐಎಎಂ) 63ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು, ”ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವು ನಾಗರಿಕರ ಆರೋಗ್ಯಕ್ಕೆ ಅಪಾಯವಾಗಿದೆ. ಡೀಸೆಲ್ ಚಾಲಿತ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿಯನ್ನು ಹಾಕಬೇಕೆಂದು ಕೋರಿ ನಾನು ಇಂದು ಸಂಜೆ ಹಣಕಾಸು ಸಚಿವರಿಗೆ ಪತ್ರವನ್ನು ಹಸ್ತಾಂತರಿಸಲಿದ್ದೇನೆ” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿತ್ತು.

 

  •  

ಸಚಿವರ ಸ್ಪಷ್ಟನೆ ಹೀಗಿದೆ.. ಈ ಕುರಿತು ವರದಿ ಬೆನ್ನಲ್ಲೇ ಸಚಿವ ನಿತಿನ್​ ಗಡ್ಕರಿ ಸಾಮಾಜಿಕ ಜಾಲತಾಣದ ‘ಎಕ್ಸ್​’ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ”ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ ಶೇ.10ರಷ್ಟು ಜಿಎಸ್‌ಟಿಯನ್ನು ಸೂಚಿಸುವ ಮಾಧ್ಯಮ ವರದಿಗಳನ್ನು ಸ್ಪಷ್ಟಪಡಿಸುವ ತುರ್ತು ಅಗತ್ಯವಿದೆ. ಇಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗುತ್ತದೆ” ಎಂದು ಗಡ್ಕರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ