Breaking News

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್​ 2ರಲ್ಲಿ ವಿದೇಶಿ ವಿಮಾನ ಹಾರಾಟ ಶುರು

Spread the love

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್​ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಇಂದಿನಿಂದ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ ಟರ್ಮಿನಲ್​ 2ಗೆ ಶಿಫ್ಟ್​ ಆಗಿದೆ. 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗಾರ್ಡನ್​ ಟರ್ಮಿನಲ್ ಅತ್ಯಾಧುನಿಕ ತಂತ್ರಜ್ಞಾನವುಳ್ಳದ್ದಾಗಿದೆ.​ ಕಳೆದ ವರ್ಷ ನವೆಂಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಟರ್ಮಿನಲ್​ ಅನ್ನು ಉದ್ಘಾಟನೆ ಮಾಡಿದ್ದರು.

ಜನವರಿ 15ರಿಂದ ಕೆಲ ದೇಶಿಯ ವಿಮಾನಗಳ ಹಾರಾಟ ಮಾತ್ರ ಟಿ2ನಲ್ಲಿ ಆರಂಭಿಸಲಾಗಿತ್ತು. ಕೆಲವು ಕೆಲಸಗಳು ಬಾಕಿ ಇದ್ದ ಕಾರಣ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇರಲಿಲ್ಲ. ಇದೀಗ ಸಂಪೂರ್ಣ ಕಾಮಗಾರಿ ಮುಗಿಸಿ ಎಲ್ಲಾ ವಿದೇಶಿ ವಿಮಾನಗಳ ಹಾರಾಟ ಟರ್ಮಿನಲ್​ 2ನಲ್ಲಿ ಇಂದಿನಿಂದ ಆರಂಭವಾಗಿದೆ. ಇಂದು ಬೆಳಗ್ಗೆ 10.45ಕ್ಕೆ ಟರ್ಮಿನಲ್​ 2 ಮೊದಲ ವಿದೇಶಿ ವಿಮಾನವಾಗಿ ಸೌದಿ ಏರ್​ಲೈನ್ಸ್​ ವಿಮಾನ ಆಗಮಿಸಿತು. ಈ ವಿಮಾನದಲ್ಲಿ ಬಂದ 212 ಪ್ರಯಾಣಿಕರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಅತ್ಯಾಕರ್ಷಕವಾಗಿದೆ ಟರ್ಮಿನಲ್​ 2: ಇನ್ನು, ಹಳೆಯ ಟರ್ಮಿನಲ್​ 1 ದೇಶಿಯ ವಿಮಾನಗಳ ಹಾರಾಟಕ್ಕೆ ಮೀಸಲಿಡಲಾಗಿದೆ. ಟರ್ಮಿನಲ್ 2 ಅನ್ನು ಉದ್ಯಾನವನದಂತೆ ಅತ್ಯಂತ ಸುಂದರವಾಗಿ ನಿರ್ಮಿಸಲಾಗಿದೆ. ಸುಸ್ಥಿರತೆ, ತಂತ್ರಜ್ಞಾನ, ಕಲೆ ಮತ್ತು ಸಂಸ್ಕೃತಿ ಎಂಬ ನಾಲ್ಕು ಆಧಾರಸ್ತಂಭಗಳ ಮೇಲೆ ರೂಪುಗೊಂಡಿದೆ. ಇಲ್ಲಿ ಸಸ್ಯ ಸಾಮ್ರಾಜ್ಯವನ್ನೇ ಸೃಷ್ಟಿಸಲಾಗಿದೆ. 180 ಅಳಿವಿನಂಚಿನಲ್ಲಿರುವ ಸಸ್ಯಗಳು, 600-800 ವರ್ಷದ ಹಳೆಯ ಮರಗಳು, 620 ಸ್ಥಳೀಯ ಸಸಿಗಳು, 150 ಪಾಮ್‌ ಜಾತಿಯ ಸಸ್ಯಗಳು, 7,700 ಕಸಿ ಮಾಡಿದ ಮರಗಳು, 96 ಕಮಲ, 100 ಲಿಲ್ಲಿ ಜಾತಿಯ ಸಸ್ಯಗಳನ್ನು ಟರ್ಮಿನಲ್‌ನಲ್ಲಿ ನೋಡಬಹುದು. ಸಸ್ಯಲೋಕದಲ್ಲಿ ಪುಟ್ಟ ಜಲಪಾತ ಮತ್ತು ಹೊಂಡವೂ ಕಾಣಸಿಗುತ್ತದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ