Breaking News

ಗ್ಯಾರಂಟಿ ಯೋಜನೆಗೆ ‘SCSPTSP’ ಅನುದಾನ ಬಳಕೆ: ಈವರೆಗೆ ಬಿಡುಗಡೆಯಾದ ಹಣ ಎಷ್ಟು?

Spread the love

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (SCSP TSP) ಅನುದಾನ ಬಳಕೆ ಮಾಡುತ್ತಿದೆ.

ಸರ್ಕಾರದ ನಡೆಗೆ ಪ್ರತಿಪಕ್ಷ ಬಿಜೆಪಿ ಹಾಗು ದಲಿತ ನಾಯಕರು ಟೀಕಾಸಮರ ನಡೆಸಿದ್ದಾರೆ. ಸರ್ಕಾರ ಈಗಾಗಲೇ ಎಸ್​ಸಿಎಸ್​ಪಿಟಿಎಸ್​ಪಿ ಅನುದಾನದಿಂದ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಬಿಡುಗಡೆ ಮಾಡಿದೆ. ಈವರೆಗೆ ಬಿಡುಗಡೆಯಾದ ಹಣ ಎಷ್ಟು?, ಎಷ್ಟು ಹಣ ಹಂಚಿಕೆಯಾಗಿದೆ? ನೋಡೋಣ.

ಕಾಂಗ್ರೆಸ್ ಸರ್ಕಾರ ತನ್ನ‌ ಶತದಿನಗಳ ಆಡಳಿತದಲ್ಲಿ ಗ್ಯಾರಂಟಿಗಳ ಅನುಷ್ಠಾನಕ್ಕೆ ಬಹುತೇಕ ಆದ್ಯತೆ ನೀಡಿದೆ. ಯುವನಿಧಿ ಹೊರತುಪಡಿಸಿ ಉಳಿದೆಲ್ಲ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. 2023-24ರ ಸಾಲಿನಲ್ಲಿ ಈ ಯೋಜನೆಗಳಿಗೆ 30-35 ಸಾವಿರ ಕೋಟಿ ರೂ. ವೆಚ್ಚವಾಗುವ ಅಂದಾಜು ಮಾಡಲಾಗಿದೆ. ಮುಂದಿನ ವರ್ಷದಿಂದ ಸುಮಾರು 50 ಸಾವಿರ ಕೋಟಿ ರೂ.‌ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಕೆಲ‌ ಇಲಾಖೆಗಳಿಗೆ ಅನುದಾನ ಕಡಿತಗೊಳಿಸಿ, ಇತರ ಮೂಲಗಳಿಂದ ಸದ್ಯ ಅನುದಾನ ಹೊಂದಿಸಲಾಗುತ್ತಿದೆ. ಇದರಲ್ಲಿ ಪ್ರಮುಖವಾಗಿ ದಲಿತ ಸಮುದಾಯಕ್ಕಾಗಿ ಮೀಸಲಿಡುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (SCSP TSP) ಅನುದಾನದಡಿ ದೊಡ್ಡ ಪ್ರಮಾಣದ ಅನುದಾನವನ್ನು ಬಳಕೆ ಮಾಡಲಾಗುತ್ತಿದೆ. ಎಸ್​ಸಿಎಸ್​ಪಿಟಿಎಸ್​ಪಿ ಯೋಜನೆಯ ಅನುದಾನ ಬಳಕೆ ಮಾಡುವುದಕ್ಕೆ ಪ್ರತಿಪಕ್ಷ ಬಿಜೆಪಿ ಹಾಗೂ ದಲಿತ ನಾಯಕರಲ್ಲದೇ ಕಾಂಗ್ರೆಸ್​ನ ಕೆಲ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಅನುದಾನ ದುರ್ಬಳಕೆಯಾಗಲಿದೆ ಎಂದು ಆರೋಪಿಸಿದ್ದರು. ಆದರೂ ಸಿದ್ದರಾಮಯ್ಯ ಸರ್ಕಾರ ಎಸ್​ಸಿಎಸ್​ಪಿಟಿಎಸ್​ಪಿಯಡಿ ಸುಮಾರು 11 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ.

ಯಾವ ಯೋಜನೆಗೆ ಎಷ್ಟು ಅನುದಾನ ಹಂಚಿಕೆ?: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಎಸ್​ಸಿಎಸ್​ಪಿಟಿಎಸ್​ಪಿ ಯೋಜನೆಯಿಂದ 2023-24ರಡಿ 11,144 ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ. ಈ ಪೈಕಿ ಶಕ್ತಿ ಯೋಜನೆಗಾಗಿ ಪರಿಶಿಷ್ಟ ಜಾತಿ ಉಪಯೋಜನೆ (SCSP)ಯಿಂದ 560 ಕೋಟಿ ರೂ. ಹಂಚಿಕೆ ಮಾಡಿದ್ದರೆ, ಪರಿಶಿಷ್ಟ ಪಂಗಡ ಉಪಯೋಜನೆಯಿಂದ (TSP) 252 ಕೋಟಿ ರೂ. ಹಂಚಿಕೆ ಮಾಡುವ ಮೂಲಕ ಒಟ್ಟು 812 ಕೋಟಿ ರೂ. ಹಂಚಿಕೆ ಮಾಡಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ