ಬಸ್‌ನಲ್ಲಿ ನಿಲಲ್ಲು ಜಾಗವಿಲ್ಲದೆ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ನಡೆದಿದೆ.
ಕಳೆದ ಎರಡು ತಿಂಗಳಿಂದ ಬಸ್ ನಲ್ಲಿ ವಿದ್ಯಾರ್ಥಿಗಳು ನಿಲ್ಲಲ್ಲು ಜಾಗವಿಲ್ಲ.ಕೇರೂರ ಗ್ರಾಮದಲ್ಲಿ ಬಸ್ ಗಳನ್ನು ನಿಲ್ಲಿಸುತ್ತಿಲ್ಲಾ.ಇದರಿಂದಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ.
ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ನಮ್ಮ ಪ್ರತಿಭಟನೆ ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ
ಎಂದು ವಿದ್ಯಾರ್ಥಿಗಳು ಪಟ್ಟುಹಿಡಿದರು.ಚಿಕ್ಕೋಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.