Breaking News

ರೈಲಿನಲ್ಲಿ ಸಂಚರಿಸುತ್ತಿದ್ದ 8 ಪ್ರಯಾಣಿಕರು ಅಸ್ವಸ್ಥ, ಬಿಮ್ಸ್‌ಗೆ ದಾಖಲು

Spread the love

ಬೆಳಗಾವಿ: ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿನಲ್ಲಿ 8 ಮಂದಿ ಯುವಕರು ಪ್ರಜ್ಞೆ ತಪ್ಪಿದ ಘಟನೆ ಸೋಮವಾರ ನಡೆದಿದೆ. ಅಸ್ವಸ್ಥರನ್ನು ತಕ್ಷಣವೇ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಸ್ಕೋ-ನಿಜಾಮುದ್ದೀನ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ಗಾಬರಿಯಾದ ಸಹ ಪ್ರಯಾಣಿಕರು ಈ ವಿಚಾರವನ್ನು ತಕ್ಷಣ ರೈಲ್ವೇ ಪೊಲೀಸರ ಗಮನಕ್ಕೆ ತಂದಿದ್ದಾರೆ. ಕೂಡಲೇ ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಸ್ವಸ್ಥಗೊಂಡ ಎಲ್ಲರೂ ಉತ್ತರ ಪ್ರದೇಶದ ಜಾನ್ಸಿ ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಉದ್ಯೋಗ ‌ಅರಸಿ ಗೋವಾಕ್ಕೆ ಬಂದಿದ್ದ ಇವರು ಮರಳಿ ವಾಸ್ಕೋ-ನಿಜಾಮುದ್ದೀನ್ ರೈಲಿನಲ್ಲಿ ‌ತಮ್ಮೂರಿಗೆ ವಾಪಸಾಗುತ್ತಿದ್ದರು.

ಜಿಲ್ಲಾಸ್ಪತ್ರೆಗೆ ‌ಹಿರಿಯ ಪೊಲೀಸ್ ಅಧಿಕಾರಿಗಳು, ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವೈದ್ಯರ ಪ್ರತಿಕ್ರಿಯೆ: ಜಿಲ್ಲಾಸ್ಪತ್ರೆಯ ವೈದ್ಯ ಡಾ.ವಿಜಯಕುಮಾರ ಮಾತನಾಡಿ, ”ಎಂಟು ಮಂದಿ, ಅಂದಾಜು 20-25 ವಯಸ್ಸಿನ ಯುವಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಮುಂದುವರಿದಿದೆ. ಎಲ್ಲರೂ ನಿದ್ದೆಯ ಮಂಪರಿನಲ್ಲಿದ್ದಾರೆ. ಊಟ ಮತ್ತು ಚಾಕಲೇಟ್ ತಿಂದಿದ್ದೇವೆ ಎಂದು ಅವರು ಹೇಳಿದ್ದಾರೆ. ಮಾದರಿಯನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುವುದು‌. ವರದಿ ಬಂದ ಬಳಿಕವೇ ಸತ್ಯಾಂಶ ಗೊತ್ತಾಗಲಿದೆ. ಸದ್ಯಕ್ಕೆ ಎಲ್ಲರ ಆರೋಗ್ಯ ಸ್ಥಿರವಾಗಿದೆ” ಎಂದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ