Breaking News

ಅತ್ಯಾಚಾರ ಪ್ರಕರಣ ದಾಖಲಿಸಿದ ಲಿವ್​ ಇನ್ ಸಂಗಾತಿಯ ಹತ್ಯೆ

Spread the love

ಪಾಲ್ಘರ್ (ಮಹಾರಾಷ್ಟ್ರ): ತನ್ನೊಂದಿಗೆ ಸಹಜೀವನ (ಲಿವ್​ ಇನ್​​) ನಡೆಸುತ್ತಿದ್ದ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸಿದ ಕಾರಣಕ್ಕೆ ಆಕೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ, ಶವ ಎಸೆದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಮಂಗಳವಾರ 43 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಸಾಯಿ ಪ್ರದೇಶದ ನಿವಾಸಿ ಬಂಧಿತ ಆರೋಪಿಯಾಗಿದ್ದು, ಆಗಸ್ಟ್ 9ರಿಂದ 12ರ ನಡುವೆ ತನ್ನ 28 ವರ್ಷದ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಶವವನ್ನು ನೆರೆ ರಾಜ್ಯ ಗುಜರಾತ್‌ನ ವಾಪಿ ಪಟ್ಟಣ ಸಮೀಪ ವಿಲೇವಾರಿ ಮಾಡಿರುವ ಮಾಹಿತಿ ಲಭ್ಯವಾಗಿದೆ. ಸಂತ್ರಸ್ತೆಯ ಮೃತದೇಹ ಇನ್ನೂ ಪತ್ತೆಯಾಗಿಲ್ಲ ಎಂದು ವಸಾಯಿ ಸಹಾಯಕ ಪೊಲೀಸ್ ಆಯುಕ್ತೆ ಪದ್ಮಜಾ ಬಡೆ ಮಾಹಿತಿ ನೀಡಿದರು.

 

ಸಂತ್ರಸ್ತೆ ನಾಪತ್ತೆಯಾದ ಬಗ್ಗೆ ಆಕೆಯ ಕುಟುಂಬ ಆಗಸ್ಟ್ 14ರಂದು ನೈಗಾಂವ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿತ್ತು. ಈ ದೂರಿನ ಮೇಲೆ ತನಿಖೆ ಆರಂಭಿಸಿದಾಗ ಆಕೆಯೊಂದಿಗೆ ಸಹಜೀವನದಲ್ಲಿದ್ದ ಆರೋಪಿಯ ಸುಳಿವು ಸಿಕ್ಕಿತ್ತು. ಸಂತ್ರಸ್ತೆ ಅತ್ಯಾಚಾರದ ದೂರು ದಾಖಲಿಸಿದ್ದರಿಂದ ಆರೋಪಿ ಕೋಪಗೊಂಡಿದ್ದ. ದೂರು ಹಿಂಪಡೆಯುವಂತೆ ಒತ್ತಡ ಹೇರಿದ್ದ. ಆದರೆ, ನಿರಾಕರಿಸಿದ್ದ ಕಾರಣ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ವಿವರಿಸಿದರು


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ