Breaking News

ಹಗರಣಗಳಿಂದ ಪಾರಾಗಲು ‌ನನ್ನ ವಿರುದ್ಧ ಹೈಕಮಾಂಡ್​​ಗೆ ದೂರು: ಬಿ ಕೆ ಹರಿಪ್ರಸಾದ್

Spread the love

ಕೊಪ್ಪಳ: ‘ಕೆಲವರು ತಾವು ಮಾಡಿದ ಹಗರಣಗಳಿಂದ ಪಾರಾಗಲು ನನ್ನ ವಿರುದ್ಧ ಹೈಕಮಾಂಡ್​ಗೆ ದೂರು ನೀಡುವ ನಾಟಕವಾಡುತ್ತಿದ್ದಾರೆ. ಅವರಿಗೆ ದೈರ್ಯ ಇದ್ದರೆ ಮೊದಲು ಹಗರಣಗಳಿಂದ ಹೊರಗೆ ಬರಲಿ. ಅದು ಬಿಟ್ಟು ನನ್ನ ಮೇಲೆ ದೂರು ನೀಡಲು ಮುಂದಾಗಿರುವುದು ವಿಪರ್ಯಾಸ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು.

ಜಿಲ್ಲೆಯ ಕುಕನೂರು ತಾಲೂಕಿನ ತಳಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ”ನನ್ನ ವಿರುದ್ಧ ದೂರು ನೀಡುವವರು ಮೊದಲು ತಾವು ಏನೆಂದು ತಿಳಿದುಕೊಳ್ಳಬೇಕು. ತಮ್ಮ ಮೇಲಿರುವ ಹಗರಣಗಳಿಂದ ಪಾರಾಗಲು ಹೈಕಮಾಂಡ್​ಗೆ ದೂರು ನೀಡುತ್ತಿದ್ದಾರೆ ಎಂದು ಕೆಲವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಉಸ್ತುವಾರಿಗೆ ದೂರು ನೀಡುವುದಾಗಿ ಕೆಲವರು ಹೇಳುತ್ತಿದ್ದಾರೆ. ದೂರು ಕೊಟ್ಟರೆ ಬಹಳ ಸಂತೋಷ. ಉಸ್ತುವಾರಿಗೆ ಮಾತ್ರ ಯಾಕೆ, ಪಕ್ಷದ ಎಲ್ಲ ಹಿರಿಯರಿಗೂ ದೂರು ನೀಡಲಿ ಎಂದು ಹೇಳಿದರು.

ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ : ಶಾಸಕ‌ ಬಸನಗೌಡ ಪಾಟೀಲ ಯತ್ನಾಳ್​ ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ತಿಂಗಳಲ್ಲಿ ಪತನವಾಗಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ‘ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಕಿತ್ತಾಟ ಇಲ್ಲ. ಆಂತರಿಕ ಪ್ರಜಾಪ್ರಭುತ್ವ ಇದೆ. ಅದರಂತೆ ಮುಕ್ತವಾಗಿ ಮಾತನಾಡುತ್ತೇನೆ. ಬಿಜೆಪಿ ನಾಯಕರ ಹಾಗೆ ನಾಗಪುರದಿಂದ ನಿರ್ದೇಶನ ತೆಗೆದುಕೊಂಡು ಮಾತನಾಡುವುದಿಲ್ಲ ಎಂದು ತಿರುಗೇಟು ನೀಡಿದರು. ಹಳ್ಳಿ ಹಕ್ಕಿ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ವಿಶ್ವನಾಥ್ ಸದ್ಯ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದಾರಾ? ಎಂದು ಪ್ರಶ್ನಿಸುವ ಮೂಲಕ ಲೇವಡಿ ಮಾಡಿದರು.

ಸಿದ್ದು ವಿರುದ್ಧ ಹರಿಪ್ರಸಾದ್​ ಪರೋಕ್ಷ ವಾಗ್ದಾಳಿ : ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಹಿಂದುಳಿದ ವರ್ಗಗಳ ಸಮಾನಮನಸ್ಕರ ಸಭೆಯಲ್ಲಿ ವಿಧಾನ ಪರಿಷತ್​ ಸದಸ್ಯ ಬಿ.ಕೆ ಹರಿಪ್ರಸಾದ್​ ಅವರು ಸಿಎಂ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ಕೆಲವರು ಪಂಚೆ ಹಾಕಿಕೊಂಡು, ಹೂಬ್ಲೆಟ್​ ವಾಚ್​ ಹಾಕಿಕೊಂಡು ಸಮಾಜವಾದಿ ಎಂದರೆ ಆಗುವುದಿಲ್ಲ ಎಂದು ಟೀಕಿಸಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ