Breaking News

ಪಿಒಪಿ ಗಣೇಶ ಮೂರ್ತಿ ತಯಾರಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ:ಈಶ್ವರ್ ಖಂಡ್ರೆ

Spread the love

ಬೆಂಗಳೂರು : ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್‌ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.

ಮುಂಬರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಚಿವರು ತಮ್ಮ ಕಚೇರಿಯಲ್ಲಿ ಮಂಗಳವಾರ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರಾಸಾಯನಿಕಲೇಪಿತ ಪಿಒಪಿ ಗಣಪತಿ ತಯಾರಕರಿಗೆ ಮಂಡಳಿ ನೊಟೀಸ್ ನೀಡಿದ್ದರೂ ಅವರು ಮತ್ತೆ ತಯಾರಿಕೆಯಲ್ಲಿ ತೊಡಗಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ ಎಂದರು.

ನೀರಿನಲ್ಲಿ ಕರಗದ ಪಿಒಪಿ ಮೂರ್ತಿಗಳು ಜಲಮೂಲಗಳಿಗೆ ಅಪಾಯಕಾರಿ. ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ನಿಮಜ್ಜನೆಯನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಪ್ರಕೃತಿ ಮತ್ತು ಪರಿಸರ ಉಳಿಸಬೇಕಾದದ್ದು ನಮ್ಮೆಲ್ಲರ ಹೊಣೆ. ಜಲಮೂಲಗಳಿಗೆ ಹಾನಿ ಉಂಟು ಮಾಡುವ ಭಾರ ಲೋಹ ಮತ್ತು ರಾಸಾಯನಿಕ ಬಣ್ಣಲೇಪಿತ ಪಿಒಪಿ ವಿಗ್ರಹಗಳ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ನಿಮಜ್ಜನೆಯನ್ನು ತಡೆಯಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ 2020ರ ಮೇ 12ರಂದು ಮಾರ್ಗಸೂಚಿ ಹೊರಡಿಸಿದೆ. ಅದಕ್ಕನುಗುಣವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಕೂಡ 21-08-2023ರಂದು ಸುತ್ತೋಲೆ ಹೊರಡಿಸಿ ಪಿಒಪಿ ಮತ್ತು ಭಾರ ಲೋಹ ಮಿಶ್ರಿತ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ತಯಾರಿಕೆ, ಮಾರಾಟ, ಸಾಗಾಟ ಮತ್ತು ನಿಮಜ್ಜನೆೆಯನ್ನು ನಿಷೇಧಿಸಿದೆ. ಈಗ ಇದರ ಕಟ್ಟುನಿಟ್ಟಿನ ಪಾಲನೆ ಆಗಬೇಕು ಎಂದು ತಾಕೀತು ಮಾಡಿದರು.


Spread the love

About Laxminews 24x7

Check Also

ಸಿಎಂ ಬದಲಾವಣೆ ಚರ್ಚೆ: ಹೈಕಮಾಂಡ್​​ ನಿರ್ಧಾರ ಅಂತಿಮ:ಡಾ.ಜಿ.ಪರಮೇಶ್ವರ್

Spread the love ಬೆಂಗಳೂರು: “ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್​ಪಿ ಸಭೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ