Breaking News

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 6 ಆರೋಪಿಗಳ ಬಂಧನ

Spread the love

ಬೆಂಗಳೂರು/ಉಡುಪಿ: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌.

 

ಚೈತ್ರಾ ಕುಂದಾಪುರ, ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್ (ವಿಶ್ವನಾಥ್ ಪಾತ್ರಧಾರಿ), ಧನರಾಜ್, ಶ್ರೀಕಾಂತ್ ಹಾಗೂ ಪ್ರಜ್ವಲ್ ಬಂಧಿತರು. ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. 3 ಪ್ರತ್ಯೇಕ ತಂಡ ರಚಿಸಿಕೊಂಡು ಕಾರ್ಯಾಚರಣೆಗಿಳಿದಿದ್ದ ಸಿಸಿಬಿ ಪೊಲೀಸರು ಕಲಬುರಗಿ, ಚಿಕ್ಕಮಗಳೂರು, ಉಡುಪಿಯಲ್ಲಿ ಶೋಧ ನಡೆಸಿದ್ದರು.

 ಬಂಧಿತ ಆರೋಪಿಗಳುಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವ್ಯಕ್ತಿಯೊಬ್ಬರಿಗೆ ವಂಚಿಸಿರುವ ಆರೋಪವನ್ನು ಚೈತ್ರಾ ಎದುರಿಸುತ್ತಿದ್ದಾರೆ. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕರಾಗಿರುವ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಚೈತ್ರಾ ವಿರುದ್ಧ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸರಿಗೂ ದೂರು ನೀಡಿದ್ದರು. ಕೇಂದ್ರದ ಬಿಜೆಪಿ ನಾಯಕರು ಹಾಗೂ ಆರ್​ಎಸ್​ಎಸ್​ ಪ್ರಮುಖರ ಹೆಸರಿನಲ್ಲಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 6 ಆರೋಪಿಗಳ ಬಂಧನ

 

ಗೋವಿಂದ ಬಾಬು ಪೂಜಾರಿ ಪೊಲೀಸರಿಗೆ ನೀಡಿದ ದೂರಿನ ವಿವರ: “ನಾನುಉಡುಪಿಯ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಕಳೆದ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ಸಂದರ್ಭದಲ್ಲಿ ಕೆಲವು ಬೆಂಬಲಿಗರು ಚೈತ್ರಾ ಕುಂದಾಪುರ ಅವರನ್ನು ನನಗೆ ಪರಿಚಯಿಸಿದ್ದರು. ನನ್ನ ಮುಗ್ಧತೆಯನ್ನು ಬಳಸಿಕೊಂಡ ಚೈತ್ರಾ, ತಾನು ಹಿಂದೂಪರ ಸಂಘಟನೆಯಲ್ಲಿರುವುದರಿಂದ ಆರ್​ಎಸ್​ಎಸ್‌ಎಸ್ ವರಿಷ್ಠರಿಗೂ ಹತ್ತಿರ, ಪ್ರಧಾನಿ ಕಚೇರಿಯಲ್ಲಿಯೂ ಪ್ರಭಾವಿಯಾಗಿದ್ದೇನೆ. ಈ ಎಲ್ಲ ಪ್ರಭಾವಗಳನ್ನು ಬಳಸಿ ಟಿಕೆಟ್ ಕೊಡಿಸುವುದಾಗಿ ನಂಬಿಸಿದ್ದರು. ನಂತರ ಕೇಂದ್ರದ ಆರ್​ಎಸ್​ಎಸ್​ ಪ್ರಮುಖ ಎಂದು ವಿಶ್ವನಾಥ್ ಎಂಬಾತನನ್ನು ಪರಿಚಯಿಸಿದ್ದರು. ಅವರ ನಿರ್ದೇಶನದ ಮೇರೆಗೆ 3 ಹಂತಗಳಲ್ಲಿ ಸುಮಾರು 7 ಕೋಟಿ ರೂಪಾಯಿ ಹಣ ಪಡೆದಿದ್ದರು.”

“ಒಂದು ವೇಳೆ ಟಿಕೆಟ್ ಕೈ ತಪ್ಪಿದರೆ ಹಣ ವಾಪಸ್ ನೀಡುವ ಭರವಸೆ ನೀಡಿದ್ದರು. ಆದರೆ ಮಾರ್ಚ್ ಆರಂಭದಲ್ಲಿ ಗೋವಿಂದ ಬಾಬು ಅವರಿಗೆ ಕರೆ ಮಾಡಿದ್ದ ಆರೋಪಿ ಗಗನ್ ಕಡೂರು, ವಿಶ್ವನಾಥ್ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದರು.


Spread the love

About Laxminews 24x7

Check Also

ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ

Spread the love ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ