Breaking News

ಲಿಂಗಾಯತರಿಗೆ ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕರೆ ಮೀಸಲಾತಿ ಕೈತಪ್ಪಲ್ಲ: ಎಸ್.ಎಂ. ಜಾಮದಾರ

Spread the love

ಬೆಳಗಾವಿ: ಲಿಂಗಾಯತ ಧರ್ಮಕ್ಕೆ ಸಾಂವಿಧಾ‌ನಿಕ ಮಾನ್ಯತೆ ಸಿಕ್ಕರೆ, ಈಗಿರುವ ಮೀಸಲಾತಿ ಕೈತಪ್ಪುತ್ತದೆ ಎಂದು ಕೆಲವರು ಹೇಳುತ್ತಿರುವುದು ಶುದ್ಧ ಸುಳ್ಳು. ನಾವು ಪ್ರತ್ಯೇಕ ಧರ್ಮದ ಹೋರಾಟ ಆರಂಭಿಸಿದ ಮೊದಲ ದಿನದಿಂದಲೂ ತಮ್ಮ ಅಸ್ತಿತ್ವ ಮತ್ತು ಸ್ವಾರ್ಥಕ್ಕಾಗಿ ಈ ರೀತಿ ಅಪಪ್ರಚಾರ ಮಾಡುತ್ತಲೇ ಇದ್ದಾರೆ, ಇದು ಅನ್ಯಾಯ ಎಂದು ಜಾಗತಿಕ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಜಾಮದಾರ ಕಿಡಿಕಾರಿದರು.

ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ರೈಸ್ತರು, ಮುಸ್ಲಿಮರು, ಜೈನರು ಸೇರಿದಂತೆ ಇತರ ಸಮುದಾಯದವರೂ ಕರ್ನಾಟಕ ರಾಜ್ಯದ ಒಬಿಸಿ ಪಟ್ಟಿಯಲ್ಲಿದ್ದಾರೆ. 2ಬಿ ನಲ್ಲಿ ಮುಸ್ಲಿಮರಿಗೆ ನಾಲ್ಕು ಪರ್ಸೆಂಟ್​ ಮೀಸಲಾತಿ ಇದೆ. 3ಬಿ ನಲ್ಲಿ ಜೈನರು, ಕ್ರೈಸ್ತರು, ಲಿಂಗಾಯತರಿದ್ದಾರೆ. ಈ ಪೈಕಿ ಕ್ರಿಶ್ಚಿಯನ್‌, ಮುಸ್ಲಿಂ, ಜೈನರಿಗೆ ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕ ನಂತರವೂ ಅವರು ಮೀಸಲಾತಿ ಪಟ್ಟಿಯಲ್ಲಿ ಯಾಕೆ ಬರಬೇಕು ಎಂದು ಪ್ರಶ್ನಿಸಿದರು.

ಇದೇ ರೀತಿ ಲಿಂಗಾಯತರಿಗೆ ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕರೆ ಅದೇ ಪಟ್ಟಿಯಲ್ಲಿ ಹೆಸರು ಬರುತ್ತದೆ. ಆದರೆ, ದುರುದ್ದೇಶದಿಂದ ಕೆಲವು ಕುತಂತ್ರಿಗಳು ಮೀಸಲಾತಿ ಕೈತಪ್ಪುತ್ತದೆ ಎಂದು ವಿನಾಕಾರಣ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಜಾತಿಗೆ ಮೀಸಲಾತಿ ಕೊಡಲು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವಿಕೆ ಆಧಾರವಾಗಿರುತ್ತದೆ. ಪ್ರತ್ಯೇಕ ಧರ್ಮದ ಮಾನ್ಯತೆ ಕೊಟ್ಟರೆ, ಮೀಸಲಾತಿಯಿಂದ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಕೈ ತಪ್ಪುವುದಿಲ್ಲ. ಹಾಗಾಗಿ ಸಮುದಾಯದವರು ಆತಂಕಕ್ಕೆ ಒಳಗಾಗಬಾರದು ಎಂದು ಜಾಮದಾರ ಮನವಿ ಮಾಡಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ