Breaking News

ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಮೂವರು ಕಾಮುಕರು 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾರೆ.

Spread the love

ನವದೆಹಲಿ: ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಮೂವರು ಕಾಮುಕರು 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾರೆ.

ವಾಯವ್ಯ ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಸಹ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಹಾಗೂ ಮಾಜಿ ಬೌನ್ಸರ್‍ಗಳು ಸೇರಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಕನ್ವರ್ ಪಾಲ್(32), ಬೌನ್ಸರ್‍ಗಳಾದ ಮನೀಶ್(22) ಹಾಗೂ ಪ್ರವೀಣ್ ತಿವಾರಿ(24) ಎಂದು ಗುರುತಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿ ಈ ಕುರಿತು ಮಾಹಿತಿ ನೀಡಿ, ಮಹಿಳೆ ಮತ್ತೊಬ್ಬ ಮಹಿಳೆಯೊಂದಿಗೆ ಸುಮಾರು 10 ದಿನಗಳಿಂದ ವೇಟಿಂಗ್ ರೂಮ್‍ನಲ್ಲೇ ಇದ್ದರು. ಸೆಕ್ಯೂರಿಟಿ ಗಾರ್ಡ್ ಇದನ್ನು ಗಮನಿಸಿದ್ದು, ಮಹಿಳೆಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಯಾರೂ ಇಲ್ಲ ಎಂಬುದನ್ನು ಅರಿತಿದ್ದಾನೆ. ಮತ್ತೊಬ್ಬ ಮಹಿಳೆ ಇಲ್ಲದ್ದನ್ನು ಗಮನಿಸಿ, ಒಬ್ಬಳೇ ಇದ್ದಾಗ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿತಿ ನೀಡಿದ್ದಾರೆ.

ಈ ಲಿವಿಂಗ್ ರೂಮ್‍ನಿಂದ ಹೊರಡುವಂತೆ ಸೆಕ್ಯೂರಿಟಿ ಗಾರ್ಡ್ ತಿಳಿಸಿದ್ದು, ಬಳಿಕ ಸೆಕ್ಯೂರಿಟಿ ಗಾರ್ಡ್ ಹಾಗೂ ಬೌನ್ಸರ್‍ಗಳು ಆಕೆಯನ್ನು ಆಸ್ಪತ್ರೆಯ ಪಾರ್ಕಿಂಗ್ ಏರಿಯಾದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಕ್ಟೋಬರ್ 31ರಂದು ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಳಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದ ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ