Breaking News

ತಮಿಳುನಾಡು ಸರ್ಕಾರ ಪ್ರತಿ ಮನೆಯೊಡತಿಗೆ ತಲಾ ₹1000 ರೂ. ನೀಡುವ ಯೋಜನೆಯನ್ನು ನಾಳೆ (ಸೆ. 15 ರಂದು) ಜಾರಿಗೆ ತರಲಿದೆ.

Spread the love

ಚೆನ್ನೈ (ತಮಿಳುನಾಡು): ರಾಜ್ಯದ ಕಾಂಗ್ರೆಸ್​ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆಯೇ ತಮಿಳುನಾಡು ಸರ್ಕಾರ ಇದೀಗ ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ಪ್ರತಿ ತಿಂಗಳು ತಲಾ 1000 ರೂ ಆರ್ಥಿಕ ನೆರವು ನೀಡಲು ಮುಂದಾಗಿದೆ.

ಇದಕ್ಕಾಗಿ ಆ ರಾಜ್ಯದ 1.06 ಕೋಟಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಬೃಹತ್ ಯೋಜನೆಗೆ ನಾಳೆ ( ಸೆ.15 ರಿಂದ) ಚಾಲನೆ ನೀಡಲಿದೆ.

ಈ ಬಗ್ಗೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಮಹಿಳೆಯರ ಜೀವನದ ಗುಣಮಟ್ಟ ಹೆಚ್ಚಿಸಲು ಆರಂಭಿಸಿರುವ ಈ ಯೋಜನೆಯ “ಮಗಲಿರ್‌ ಉರಿಮೈ ತೊಗೈ” ಯೋಜನೆಯಡಿ ಹಣವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ನಗದೀಕರಿಸಿಕೊಳ್ಳಲು ಅವರಿಗೆ ಎಟಿಎಂ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅರ್ಹ (ಫಲಾನುಭವಿಗಳಿಗೆ) ಮಹಿಳೆಯರಿಗೆ ಸೆಪ್ಟೆಂಬರ್ 15 ರಿಂದ ಅವರ ಬ್ಯಾಂಕ್ ಖಾತೆಗಳಿಗೆ ಮೊತ್ತವನ್ನು ಜಮಾ ಮಾಡುವಂತೆ ನಾವು ವ್ಯವಸ್ಥೆ ಮಾಡಿದ್ದೇವೆ. ಈ ಯೋಜನೆಗೆ ಒಟ್ಟು 1.63 ಕೋಟಿ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ 1,06,50,000 ಮಂದಿ ಪ್ರಯೋಜನಕ್ಕಾಗಿ ಅಂತಿಮ ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ, ದಿವಂಗತ ಸಿ. ಎನ್ ಅಣ್ಣಾದೊರೈ ಅವರ ಜನ್ಮದಿನದಂದು ಪ್ರಾರಂಭಿಸಲಿರುವ ಯೋಜನೆಯನ್ನು ವರ್ಚುಯಲ್‌ ಮೂಲಕ ಪರಿಶೀಲಿಸಿದ ಮುಖ್ಯಮಂತ್ರಿ, ಅದರ ಅನುಷ್ಠಾನದ ಮೇಲ್ವಿಚಾರಣೆಯನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ವಹಿಸಲು ಮುಖ್ಯ ಕಾರ್ಯದರ್ಶಿ ಶಿವದಾಸ್ ಮೀನಾ ಅವರಿಗೆ ಸೂಚಿಸಿದರು. ಎಟಿಎಂ ಕಾರ್ಡ್‌ಗಳನ್ನು ಆರಂಭದಲ್ಲಿ ನಿರ್ದಿಷ್ಟ ಸಂಖ್ಯೆಗಳಿಗೆ ನೀಡಲಾಗುವುದು. ನಂತರದಲ್ಲಿ ಎಲ್ಲರಿಗೂ ನೀಡಬೇಕಾಗುತ್ತದೆ. ಆದರೆ ಯೋಜನೆಗೆ ಆಯ್ಕೆಯಾದ ಎಲ್ಲರಿಗೂ ಎಟಿಎಂ ಕಾರ್ಡ್‌ಗಳಿಗಾಗಿ ಕಾಯುವ ಬದಲು ತಕ್ಷಣ ನಗದು ಒದಗಿಸುವ ಯೋಜನೆಯನ್ನು ಕೂಡ ಆರಂಭಿಸಲಾಗುತ್ತದೆ ಎಂದು ಸಿಎಂ ಸ್ಟಾಲಿನ್ ಹೇಳಿದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ