Breaking News
Home / Uncategorized / ಬಳ್ಳಾರಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿ 9 ಜನರಿಗೆ ಗಾಯ

ಬಳ್ಳಾರಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿ 9 ಜನರಿಗೆ ಗಾಯ

Spread the love

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 9ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಶಿವಪುರದ ಬಳಿ ನಡೆದಿದೆ. ಬಳ್ಳಾರಿಯಿಂದ ಹಡ್ಲಗಿ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಸಾರಿಗೆ ಬಸ್‌ ರಸ್ತೆ ಬದಿಯ ಗದ್ದೆಯಲ್ಲಿ ಪಲ್ಟಿಯಾಗಿ ಬಿದ್ದಿದೆ.

ಸುಮಾರು 50 ಕ್ಕೂ ಹೆಚ್ಚು ಜನರು ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದು, ಅದರಲ್ಲಿ 9 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೋಕಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೋಕಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ತಿಂಗಳು ಶಿವಮೊಗ್ಗದಲ್ಲೂ ಸಾರಿಗೆ ಬಸ್​ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದ ಘಟನೆ ನಡೆದಿತ್ತು. ಸಾಗರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್​ಗೆ​ಬೈಕ್ ಅಡ್ಡ ಬಂದಿತ್ತು. ಅಪಘಾತ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದರು. ಬಸ್ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಇತರರು ಬಸ್​ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದರು.


Spread the love

About Laxminews 24x7

Check Also

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Spread the love ಕಲಬುರಗಿ: ಮೆಟ್ರಿಕ್ ನಕಲು ಮಾರ್ಕ್ಸ್ ಕಾರ್ಡ್ ನೀಡಲು 5000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಶಿಕ್ಷಣ ಇಲಾಖೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ