Breaking News

ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶಅಕ್ರಮ ಮತ್ತು ವಂಚನೆ ನಡೆದಿದೆ:ಡೊನಾಲ್ಡ್ ಟ್ರಂಪ್

Spread the love

ವಾಷಿಂಗ್ಟನ್, ನ.4- ಇಡೀ ಜಗತ್ತಿನ ಕುತೂಹಲ ಕೆರಳಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಮಾಜಿ ಉಪಾಧ್ಯಕ್ಷ-ಡೆಮೊಕ್ರಟಿಕ್ ಅಭ್ಯರ್ಥಿ ಜೋ ಬಿಡೆನ್ ಮುನ್ನಡೆ ಸಾಧಿಸುವ ಸಂದರ್ಭದಲ್ಲೇ ಭಾರೀ ಚುನಾವಣಾ ಅಕ್ರಮ ಮತ್ತು ವಂಚನೆ ನಡೆದಿದೆ ಎಂದು ಅಧ್ಯಕ್ಷ-ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.ಅಮೆರಿಕ ಚುನಾವಣಾ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಭಾರೀ ಚುನಾವಣಾ ಅಕ್ರಮ ಮತ್ತು ವಂಚನೆ ನಡೆದಿದೆ. ಪ್ರತಿಸ್ಪರ್ಧಿ ಜೋ ಬಿಡೆನ್ ಈ ಮೂಲಕ ಅಮೆರಿಕಕ್ಕೆ ಭಾರೀ ದ್ರೋಹ ಎಸಗಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಈ ಚುನಾವಣಾ ಅಕ್ರಮದ ವಿರುದ್ಧ ನಾನು ಸುಮ್ಮನಿರುವುದಿಲ್ಲ. ಸುಪ್ರೀಂಕೋರ್ಟ್‍ನಲ್ಲಿ ಈ ಬಗ್ಗೆ ಹೋರಾಟ ನಡೆಸಿ ನ್ಯಾಯ ಪಡೆಯುವುದಾಗಿ ಟ್ರಂಪ್ ಹೇಳಿದ್ದಾರೆ.ಇದೇ ಸಂದರ್ಭದಲ್ಲಿ ತಮ್ಮ ಪರವಾಗಿ ಮತ್ತು ರಿಪಬ್ಲಿಕನ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ ಮತದಾರರು ಮತ್ತು ಬೆಂಬಲಿಗರಿಗೆ ಟ್ರಂಪ್ ಕೃತಜ್ಞತೆ ಸಲ್ಲಿಸಿದ್ದಾರೆ.

 


Spread the love

About Laxminews 24x7

Check Also

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Spread the loveಟೆಹ್ರಾನ್‌: ಅಮೆರಿಕ-ಇಸ್ರೇಲ್‌ ಹಾಗೂ ಗಲ್ಫ್‌ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ