Breaking News

5 ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ.

Spread the love

ಹೈದರಾಬಾದ್​: 2024 ರ ಲೋಕಸಭಾ ಚುನಾವಣೆ ಸಮರಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ನಿರ್ಣಾಯಕ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಸಿದ್ಧತೆಗಳನ್ನು ಭರ್ಜರಿಯಾಗೇ ಆರಂಭಿಸಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​​​​​​​​ಗೆ ಮರು ಚೇತರಿಕೆ. ಮೈತ್ರಿಗಳೊಂದಿಗೆ ಸಮನ್ವಯ, ಇಂಡಿಯಾ ಒಕ್ಕೂಟದ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳ ಬಗ್ಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಮಾರ್ಗದರ್ಶನದಲ್ಲಿ ಚರ್ಚಿಸಲಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಗಳ ಬಗ್ಗೆ ಎರಡು ದಿನಗಳ ಕಾಲ ನಡೆಯುವ ಚಿಂತನ-ಮಂಥನದ ಪ್ರಮುಖ ಅಜೆಂಡಾ ಆಗಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳ ನಡುವೆ ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ, ಕಲಹ ಪೀಡಿತ ಮಣಿಪುರದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಉದ್ವಿಗ್ನತೆ. ಅದಾನಿ ಗ್ರೂಪ್ ವಿರುದ್ಧದ ಇತ್ತೀಚಿನ ಆರೋಪಗಳು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ಭಯೋತ್ಪಾದಕ ದಾಳಿ ಸೇರಿದಂತೆ ಇನ್ನಿತರ ವಿಷಯಗಳು ಸಿಡಬ್ಲ್ಯುಸಿ ಸಭೆಯಲ್ಲಿ ಚರ್ಚೆಗೆ ಬರಲಿವೆ.

ಶನಿವಾರ, ಖಾಯಂ ಮತ್ತು ವಿಶೇಷ ಆಹ್ವಾನಿತರು ಸೇರಿದಂತೆ 84 ಸಿಡಬ್ಲ್ಯೂಸಿ ಸದಸ್ಯರು ಮತ್ತು ನಾಲ್ಕು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಿಡಬ್ಲ್ಯುಸಿ ಸಭೆಗೆ ಹಾಜರಾಗಲಿದ್ದಾರೆ. ಕರ್ನಾಟಕದಲ್ಲಿ ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನು ಯಶಸ್ವಿಯಾಗಿ ಜಾರಿಗೆ ತಂದಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​ ಹಾಗೂ ಪಕ್ಷದ ಇನ್ನಿತರ ಹಿರಿಯ ನಾಯಕರು ಇಂದಿನ ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 17 ರಂದು CWC ಸಭೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ (PCC)ಯ ಮುಖ್ಯಸ್ಥರು ಸೇರಿ 147 ಪಕ್ಷದ ಸದಸ್ಯರು ಭಾಗವಹಿಸುತ್ತಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕರು ಸಹ ಈ ಸಭೆಯ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ