Breaking News

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯೋ, ತಮಿಳುನಾಡಿನ ಮುಖ್ಯಮಂತ್ರಿಯೋ: B.S.Y.

Spread the love

ಬೆಂಗಳೂರು: ಇಂಡಿಯಾ ಒಕ್ಕೂಟವನ್ನು ಬಲಪಡಿಸಲು ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗಿದೆ.

ಈ ಮೂಲಕ ಪರೋಕ್ಷವಾಗಿ ತಮಿಳುನಾಡಿಗೆ ಬೆಂಬಲ ಕೊಡುವ ಮೂಲಕ ಸರ್ಕಾರವು ರಾಜ್ಯದ ಹಿತ ಕಡೆಗಣಿಸಿದೆ. ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯೋ ತಮಿಳುನಾಡಿನ ಮುಖ್ಯಮಂತ್ರಿಯೋ ಎನ್ನುವ ಪ್ರಶ್ನೆಯನ್ನು ಅವರೇ ಹಾಕಿಕೊಳ್ಳಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂಡಿಯಾ ಒಕ್ಕೂಟವನ್ನು ಬಲಪಡಿಸುವ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ನಿತ್ಯ 5000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮೊದಲೇ ಸುಪ್ರೀಂ ಕೋರ್ಟ್​ ಮೆಟ್ಟಿಲೇರಬೇಕಿತ್ತು. ಆದರೆ ಸುಪ್ರೀಂ ಕೋರ್ಟ್ ಸಂಪರ್ಕ ಮಾಡದೇ ತಮಿಳುನಾಡನ್ನು ತೃಪ್ತಿಪಡಿಸಲು ಈ ರೀತಿ ನೀರು ಬಿಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.

ಸಂಕಷ್ಟದ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್​ಗೆ ಮನವರಿಕೆ ಮಾಡಿಕೊಡಬೇಕಿರುವುದು ಅತ್ಯಂತ ಅವಶ್ಯಕ. ಆದರೆ ಸರ್ಕಾರ ಮಾಡುತ್ತಿಲ್ಲ. ತಮಿಳುನಾಡಿನಲ್ಲಿ ಕಾವೇರಿ ನದಿಯನ್ನು ನಂಬಿ ಬೆಳೆ ಬೆಳೆಯುವವರ ಸಂಖ್ಯೆ ಹೆಚ್ಚಾಗಿದೆ. ಕಾಯಿದೆ ಪ್ರಕಾರ 1.8 ಲಕ್ಷ ಹೆಕ್ಟರ್ ಮಾತ್ರ ಬೆಳೆ ಬೆಳೆಯಲು ಅವಕಾಶವಿದೆ. ಆದರೆ ತಮಿಳುನಾಡಿನಲ್ಲಿ 3,50,000 ಹೆಕ್ಟೇರಿಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆ ಬೆಳೆಯಾಗುತ್ತಿದೆ. ಇಷ್ಟು ಬೆಳೆಗೆ ಎಲ್ಲಿಂದ ನೀರು ಕೊಡಲು ಸಾಧ್ಯ ಎನ್ನುವುದನ್ನು ಸುಪ್ರೀಂ ಕೋರ್ಟ್‌ಗೆ ನಮ್ಮ ರಾಜ್ಯ ಸರ್ಕಾರ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ ಎಂದು ದೂರಿದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ