Breaking News

ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ

Spread the love

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿರುವ ಖಾಸಗಿ ಲಾಡ್ಜ್ ವೊಂದರಲ್ಲಿ ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಯುವತಿಯರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

 

ಕುಡಚಿ ಪಟ್ಟಣದ ಲಾಡ್ಜ್​ದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಸಿಇಎನ್ ಇನ್ಸ್‌ಪೆಕ್ಟರ್ ಬಿ ಆರ್ ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆಸಿ ಗುಜರಾತ್, ಪಶ್ಚಿಮ ಬಂಗಾಳ ಮೂಲದ ತಲಾ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳಾದ ಲಾಡ್ಜ್ ಮ್ಯಾನೇಜರ್ ಮೈಸೂರು ಜಿಲ್ಲೆ ನಂಜನಗೂಡು ಮೂಲದ ರಮೇಶ್ ರಾವಳಿ, ಶಂಕರ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

ಆರೋಪಿಗಳು ಲಾಡ್ಜ್ ಬಾಡಿಗೆ ಪಡೆದು ಅಂತಾರಾಜ್ಯ ಯುವತಿಯರನ್ನು ಕರೆತಂದು ಮೊಬೈಲ್​​​ನಲ್ಲಿ ಯುವತಿಯರ ಭಾವಚಿತ್ರ ತೋರಿಸಿ ದಂಧೆ ನಡೆಸುತ್ತಿದ್ದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಕುಡಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ