Breaking News

ತಮಿಳುನಾಡಿನ ಪ್ರಭಾವ ರಾಜ್ಯ ಸರ್ಕಾರದ ಮೇಲೆ ವಿಪರೀತ ಇದ್ದ ಹಾಗೆ ಇದೆ: ಬೊಮ್ಮಾಯಿ

Spread the love

ಬೆಂಗಳೂರು: ತಮಿಳುನಾಡಿನ ಪ್ರಭಾವ ರಾಜ್ಯ ಸರ್ಕಾರದ ಮೇಲೆ ವಿಪರೀತ ಇದ್ದ ಹಾಗೆ ಇದೆ. ಸುಪ್ರೀಂ ಕೊರ್ಟ್ ಆದೇಶ ಆಗಿಲ್ಲ.

ಸಿಡಬ್ಲ್ಯೂಎಂಎ ಸಭೆ ಆಗಿಲ್ಲ. ಆದರೂ ಕಾಂಗ್ರೆಸ್ ಸರ್ಕಾರ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದರ ವಿರುದ್ಧ ನಮ್ಮ ಪಕ್ಷ ತೀವ್ರ ವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಹೇಳಿದರು.

ಮೊದಲು ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೂ ನೀರು ಬಿಡುತ್ತಾರೆ. ನೀರು ಬಿಡಲು ತೀರ್ಮಾನ ಮಾಡುವುದಾದರೆ ಸರ್ವ ಪಕ್ಷದ ಸಭೆ ಕರೆಯುವ ಅಗತ್ಯ ಏನಿತ್ತು? ಎಂದು ಪ್ರಶ್ನಿಸಿದರು. ಸಿಎಂ ಸರ್ವ ಪಕ್ಷದ ಸಭೆ ಕರೆದು ನೀರು ಬಿಡುವುದಿಲ್ಲ ಅಂತ ಹೇಳುತ್ತಾರೆ. ಡಿಸಿಎಂ ನೀರು ಬಿಡುತ್ತಾರೆ. ಇದು ಊಸರವಳ್ಳಿ ಸರ್ಕಾರ. ಈ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದು ತಮಿಳುನಾಡಿಗೆ ನೀರು ಬಿಡುತ್ತಿರುವುದು ಕರಾಳ ನಿರ್ಣಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯವರಿಗೆ ಪ್ರಧಾನಿ ಭೇಟಿ ಮಾಡಿ ಮಾತನಾಡುವ ಧಮ್ ಇಲ್ಲ ಎಂಬ ಡಿಸಿಎಂ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಿಜವಾದ ತಾಕತ್ತು ಧಮ್ಮು ಇದ್ದಿದ್ದರೆ ನೀರು ಬಿಡುತ್ತಿರಲಿಲ್ಲ. ನೀರು ಬಿಟ್ಟು ತಾಕತ್ತು ಧಮ್ಮಿನ ಬಗ್ಗೆ ಮಾತನಾಡುತ್ತಾರೆ‌. ನಿಮಗೆ ತಾಕತ್ತು, ಧಮ್ ಇದ್ದರೆ ಸುಪ್ರೀಂಕೋರ್ಟ್ ನಲ್ಲಿ ವಾದ ಮಾಡಿ ರಾಜ್ಯದ ಹಿತ ಕಾಪಾಡಿ ಎಂದು ತಿರುಗೇಟು ನೀಡಿದರು. ಯಾವುದೇ ರಾಜ್ಯದ ಎಂಪಿಗಳು ಪ್ರಧಾನಿಯನ್ನು ಭೇಟಿ ಮಾಡಿದರೂ ಏನೂ ಪ್ರಯೋಜನ ಇಲ್ಲ. ಇವರಿಗೆ ಓಟ್ ಹಾಕಿದ ಕಾವೇರಿ ಕೊಳ್ಳದ ಮಕ್ಕಳು ಪಶ್ಚಾತಾಪ ಪಡುತ್ತಿದ್ದಾರೆ‌. ಇದಕ್ಕೆ ಸುಪ್ರೀಂ ಮತ್ತು ತಮಿಳುನಾಡಿನ ಸಿಎಂ ಜೊತೆ ಮಾತುಕತೆ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ