ಬೆಂಗಳೂರು: ವಿದ್ಯುತ್ ದರದಲ್ಲಿ ಪ್ರತಿ ಯೂನಿಟ್ ಗೆ 40 ಪೈಸೆಯನ್ನು ಹೆಚ್ಚಳ ಮಾಡಿ ಸರ್ಕಾರ ಕೊವೀಡ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಶಾಕ್ ನೀಡಿದೆ.
ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದಲೇ ಅನ್ವಯವಾಗುಯತ್ತಿದೆ. ಪ್ರತಿ ಯೂನಿಟ್ ಗೆ 1. 96 ಪೈಸೆ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸರ್ಕಾರಕ್ಕೆ ಮನವಿ ಮಾಡಿತ್ತು. ಆದ್ರೆ ಸರ್ಕಾರ ಪ್ರತಿ ಯೂನಿಟ್ ಗೆ 40 ಪೈ ಹೆಚ್ಚಿಸಿದೆ.