ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಗೂಂಡಾ ಕಾಯ್ದೆಯಡಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಜೈಲಿಂದ ಬಿಡುಗಡೆಯಾಗಿದ್ದಾರೆ.
ಗೂಂಡಾ ಕಾಯ್ದೆ ರದ್ದಾದ ಹಿನ್ನೆಲೆಯಲ್ಲಿ ಇಂದು ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಕಳೆದ ಆಗಸ್ಟ್ 11ರಂದು ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಗೂಂಡಾ ಕಾಯ್ದೆಗೆ ಸಂಬಂಧಿಸಿಂತೆ ರಚಿಸಲಾಗಿದ್ದ ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ವರದಿ ನೀಡಿತ್ತು. ಹೀಗಾಗಿ ಪುನೀತ್ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನ ರದ್ದು ಪಡಿಸಲಾಗಿದೆ.