Breaking News

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ ವಿಜಯಪುರ ನಗರದ ನವಬಾಗ್ ಪ್ರದೇಶದಲ್ಲಿ ವರದಿಯಾಗಿದೆ.

ರೂಪಾ ಮೇತ್ರಿ (32) ಹಾಗೂ ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆ ಆರೋಪಿ.

ವಿವರ: ನವಭಾಗ್ ಪ್ರದೇಶದ ಭಾಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದ್ದ ಮಲ್ಲಿಕಾರ್ಜುನ ಮೂವರು ಮಕ್ಕಳು, ಪತ್ನಿ ಹಾಗೂ ಅತ್ತೆಯೊಂದಿಗೆ ವಾಸವಿದ್ದನು.‌ ಕಳೆದ ಆರು ತಿಂಗಳಿಂದ ನವಭಾಗ್ ಪ್ರದೇಶದಲ್ಲಿ ಈ ಕುಟುಂಬ ನೆಲೆಸಿತ್ತು. ಪತ್ನಿ ತನ್ನ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಮನೆ ಕೆಲಸ ಮಾಡುತ್ತಿಲ್ಲ. ಮಹಿಳಾ ಹಾಗೂ ವಿವಿಧ ಸಂಘಟನೆ‌ಗಳ ಕೆಲಸದ ಕಾರಣ ಸದಾ ಮನೆಯಾಚೆ ಇರುತ್ತಾಳೆ ಎಂದು ಕೋಪಗೊಂಡಿದ್ದಾನೆ. ಇದರಿಂದ ರೋಸಿ ಹೋಗಿದ್ದ ಆರೋಪಿ ಇಂದು‌ ಬೆಳಗಿನ ಜಾವ ಮಲಗಿದ್ದ ಪತ್ನಿ ಹಾಗು ಅತ್ತೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಂಬು ಗರ್ಭಿಣಿಯ ಕೊಲೆ (ಪ್ರತ್ಯೇಕ ಪ್ರಕರಣ): ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನು ಪತಿಯೇ ಹತ್ಯೆ ಮಾಡಿದ್ದ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ (ಸೆ.15) ನಡೆದಿತ್ತು. ಘಟನೆಯಲ್ಲಿ ಶೋಭಾ ಎನ್ನುವರು ಸಾವನ್ನಪ್ಪಿದ್ದಾರೆ. ಮಂಜು ಅಲಿಯಾಸ್ ಮಂಜುನಾಥ್ ಕೊಲೆ ಆರೋಪಿ.


Spread the love

About Laxminews 24x7

Check Also

ಕೃಷ್ಣೆ ಮಡಿಲ ಕುವರನಿಗೆ ‘ರಾಜ್ಯೋತ್ಸವ’ ಗರಿ

Spread the love ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಶಿರಹಟ್ಟಿ ಮೂಲದವರಾದ, ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರಿಗೆ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ