Breaking News

ನೆಲಮಂಗಲ: ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ

Spread the love

ನೆಲಮಂಗಲ (ಬೆಂಗಳೂರು. ಗ್ರಾ): ಇಲ್ಲಿನರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಬೆಳಗ್ಗೆ ಸ್ವಿಫ್ಟ್ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಗೊಂಡಿದ್ದ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ಘಟನೆ ನಡೆಯಿತು.

ಸ್ವಿಫ್ಟ್​ ಕಾರಿನಲ್ಲಿದ್ದ ಐವರ ಪೈಕಿ ಮೂವರು ದುರ್ಮರಣ ಹೊಂದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಂದಿನ ಅಪಘಾತ ಪ್ರಕರಣಗಳು: ನಿಂತಿದ್ದ ಬೈಕ್​ಗೆ ಗುದ್ದಿದ ಬಸ್​: ಮಂಗಳೂರಿನಲ್ಲಿ ರಸ್ತೆ ದಾಟಲೆಂದು ನಿಂತಿದ್ದ ಬೈಕ್​ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಖಾಸಗಿ ಬಸ್​ ರಭಸವಾಗಿ ಡಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ನಡೆದಿತ್ತು. ಭಾನುವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್​ನ ಹೊಸಬೆಟ್ಟು ಸಮೀಪ ಘಟನೆ ನಡೆದಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬೆಳಗ್ಗೆ 7:55ರ ವೇಳೆಗೆ ಖಾಸಗಿ ಎಕ್ಸ್‌ಪ್ರೆಸ್​ ಬಸ್​ ಶರವೇಗದಿಂದ ಬಂದು ಬೈಕ್​ಗೆ ಗುದ್ದಿದೆ. ಬೈಕ್ ಸವಾರರಾದ ಪಕ್ಷಿಕೆರೆ ಹೊಸಕಾಡು ನಿವಾಸಿ ಅಬ್ದುಲ್ ಖಾದರ್ ಅರ್ಫಾನ್ ಮತ್ತು ಹಳೆಯಂಗಡಿ ಇಂದಿರಾ ನಗರದ ನಿವಾಸಿ‌ ಅಮೀರ್ ಸಾಹಿಲ್ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ನಗರದ ಎ.ಜೆ.ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್​ ಚಾಲಕ ಡೆಲ್ಸನ್ ಕ್ಯಾಸ್ಟಲಿನೋ ಎಂಬಾತನ ವಿರುದ್ಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಮೂವರು ಸಾವು: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕರಾವಳಿ ಹೋಟೆಲ್ ಸಮೀಪ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದು, ಮೂವರು ಸಾವನ್ನಪ್ಪಿರುವ ಘಟನೆ ಆಗಸ್ಟ್​ 31 ರಂದು ನಡೆದಿತ್ತು. ಹಾವೇರಿ ಜಿಲ್ಲೆಯ ಕಾಕೊಳ ತಾಂಡ ಗ್ರಾಮದ ನಿವಾಸಿಗಳಾದ ಚೆನ್ನಪ್ಪ, ರೇಖಪ್ಪ ಹಾಗು ಮಹಂತಪ್ಪ ಮೃತಪಟ್ಟ ಕಾರ್ಮಿಕರು. ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮೂವರಿಗೆ ಡಿಕ್ಕಿ ಹೊಡೆದಿತ್ತು.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರ ಪೈಕಿ ಚೆನ್ನಪ್ಪ ಎಂಬವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ರೇಖಪ್ಪ ಮತ್ತು ಮಹಂತಪ್ಪ ಎಂಬವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ರೇಖಪ್ಪ ಮೃತಪಟ್ಟಿದ್ದರು. ಮಹಂತಪ್ಪ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಈ ಕುರಿತು ಹುಲಿಯಪ್ಪ ನೀಡಿದ ದೂರಿನ್ವಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ