Breaking News

ನಾಳೆH.D.K. ದೆಹಲಿಗೆ ಹೊರಡುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ,

Spread the love

ಶಾಸಕ ರಮೇಶ್ ಜಾರಕಿಹೊಳಿಯವರು ಇಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ನಾಳೆ ಕುಮಾರಸ್ವಾಮಿ ದೆಹಲಿಗೆ ಹೊರಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಜೆಪಿ ನಗರದಲ್ಲಿರುವ ನಿವಾಸದಲ್ಲಿ ಜಾರಕಿಹೊಳಿ ಭೇಟಿಯಾಗಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವನ್ನು ನಾನು ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತಿಸುತ್ತೇನೆ.

ಆದಷ್ಟು ಬೇಗ ಮೈತ್ರಿ ಆದರೆ ಒಳ್ಳೆಯದಾಗುತ್ತದೆ. ಈಗಿನ ಸರ್ಕಾರ ಬೀಳಿಸುವುದನ್ನು ಈಗ ಹೇಳಲು ಆಗುವುದಿಲ್ಲ ಎಂದು ತಿಳಿಸಿದರು.ಮೈತ್ರಿಯಿಂದ ಈ ಕೆಟ್ಟ ಸರ್ಕಾರ ತೆಗೆಯಲು ಮುಂದಿನ ಹೋರಾಟ ಮಾಡಲು ಶಕ್ತಿ ಬರುತ್ತದೆ, ಕುಮಾರಸ್ವಾಮಿ ಅವರು ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ