Breaking News

ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಮತ್ತು 16 ಶಾಸಕರ ಅನರ್ಹತೆ ಅರ್ಜಿಯನ್ನು ಎರಡು ವಾರದಲ್ಲಿ ಇತ್ಯರ್ಥಪಡಿಸಿ ಎಂದು ಸುಪ್ರೀಂಕೋರ್ಟ್​ ಸ್ಪೀಕರ್​ಗೆ ಸೂಚಿಸಿದೆ.

Spread the love

ನವದೆಹಲಿ: ಶಿವಸೇನೆಯಿಂದ ಬಂಡೆದ್ದಿರುವ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್​ ಶಿಂಧೆ ಮತ್ತು ಅವರ ಬಣದ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ವಿಚಾರಣೆ ನಡೆಸಿ, ಎರಡು ವಾರದೊಳಗೆ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್​ ಸ್ಪೀಕರ್​ಗೆ ಸೂಚಿಸಿದೆ.

 

ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಹೊತ್ತಿರುವ ಸಿಎಂ ಏಕನಾಥ್​ ಶಿಂಧೆ ಮತ್ತವರ ಬಣದ ಕುರಿತ ವಿಚಾರಣೆಗೆ 4 ತಿಂಗಳ ಹಿಂದೆಯೇ ಆದೇಶಿಸಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಬಂಡಾಯ ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಲಾಗಿದ್ದರೂ ವಿಚಾರಣೆ ನಡೆಸದೇ ಬಿಡಲಾಗಿದೆ. ಅದನ್ನು ಮುಂದಿನ ವಾರವೇ ಕೈಗೆತ್ತಿಕೊಳ್ಳಬೇಕು. ಎರಡು ವಾರಗಳ ನಂತರ ಏನು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೋರ್ಟ್​ಗೆ ತಿಳಿಸಬೇಕು. ಇದು ಅನಿರ್ದಿಷ್ಟವಾಗಿ ಮುಂದುವರಿಯಲು ಬಿಡಬಾರದು ಎಂದು ಸ್ಪೀಕರ್​ ರಾಹುಲ್​ ನಾರ್ವೇಕರ್​ಗೆ ಹೇಳಿತು.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ