Breaking News

ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ:ಈಶ್ವರಪ್ಪ

Spread the love

ಮಂಗಳೂರು: ಯಾವುದೇ ಕಾರಣಕ್ಕೂ ಕಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಯವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದರೆ.

ನಗರದಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಸಿಬಿಐಯ ಕ್ರಮವನ್ನು ಸ್ವಾಗತಿಸುತ್ತೇನೆ. ಸಿಬಿಐ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ. ಅದೇ ರೀತಿ ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಖುಷಿ ಪಡುತ್ತೇನೆ ಎಂದು ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಿಬಿಐ ವಶಪಡಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಒಂದು ಕಾಲದಲ್ಲಿ ಅಧಿಕಾರ, ಹಣ ಉಪಯೋಗಿಸಿ ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ, ಭ್ರಷ್ಟಾಚಾರಗಳು ನಡೆಯುತ್ತಿದ್ದವು. ಅದೇ ಸರ್ಕಾರ ಯಾವಾಗಲೂ ಇರುತ್ತೆ ಎಂದು ಹೇಳಲು ಆಗುವುದಿಲ್ಲ. ಈಗ ಸಿಬಿಐ ತನಿಖೆ ನಡೆಸುತ್ತಿದೆ. ಈ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ವಿನಯ್ ಕುಲಕರ್ಣಿಯವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದೆ.

ನವೆಂಬರ್ 7ರಂದು ವಿನಯ್ ಕುಲಕರ್ಣಿ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದರು. ಆದರೆ ಜನ್ಮದಿನಕ್ಕೂ ಮುಂಚೆಯೇ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ತಮ್ಮನಂತೆ ಅಣ್ಣನಿಗೂ ಜನ್ಮದಿನ ಮುಂಚೆಯೇ ಸಿಬಿಐ ಅಧಿಕಾರಿಗಳು ಡ್ರಿಲ್ ಮಾಡಲಿದ್ದಾರೆ.

ಈ ಹಿಂದೆ ಸೋದರ ವಿಜಯ್ ಕುಲಕರ್ಣಿಗೂ ಜನ್ಮದಿನ ಮುಂಚೆಯೇ ಬೆಂಗಳೂರಿನಲ್ಲಿ ವಿಚಾರಣೆ ನಡೆದಿತ್ತು. ಜನ್ಮದಿನದಂದು ಕೂಡ ಧಾರವಾಡದಲ್ಲಿ ಸಿಬಿಐ, ವಿಜಯ್ ವಿಚಾರಣೆ ನಡೆಸಿತ್ತು. ಈಗ ವಿನಯ್ ಜನ್ಮದಿನಕ್ಕೆ ಎರಡು ದಿನ ಇರುವಾಗಲೇ ಸಿಬಿಐ ವಶಕ್ಕೆ ಪಡೆದಿದೆ.

2017 ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು. ನಿದೀಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇಂದು ಬೆಳ್ಳಂಬೆಳಗ್ಗೆ ವಿನಯ್ ಮನೆಗೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮಾಜಿ ಸಚಿವರನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ