Breaking News
Home / ರಾಜಕೀಯ / ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ: ಸುತ್ತೋಲೆ ಹೊರಡಿಸಿದ ಸಿಎಸ್

ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ: ಸುತ್ತೋಲೆ ಹೊರಡಿಸಿದ ಸಿಎಸ್

Spread the love

ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಕೆಲ ವರ್ಷಗಳ ಹಿಂದೆಯೇ ಆದೇಶಿಸಲಾಗಿತ್ತು.

ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭ ಅನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಸೂಚಿಸಿಲಾಗಿತ್ತು.‌ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು (Common drinking water dispensing system) ಏರ್ಪಡಿಸುವಂತೆ ಸೂಚಿಸಲಾಗಿತ್ತು.

ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಮುಖ್ಯ ಕಾರ್ಯದರ್ಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ