Breaking News

ತಿಗಡೊಳ್ಳಿಯ ಯುವಕನಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿ ಭೀಮಾಶಂಕರ ಗುಳೇದ ಹೇಳಿದ್ದೇನು?

Spread the love

ಬೆಳಗಾವಿ: ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಪರಸ್ಪರ ಹೊಡೆದಾಡಿಕೊಂಡು ಅದರಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದಾರೆ.

ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ತಿಗಡೊಳ್ಳಿಯ ವಿಜಯ ಆರೇರ್(32) ಕೊಲೆಯಾದ ಯುವಕ. ಅದೇ ಗ್ರಾಮದ ಕಲ್ಲಪ್ಪ ಕ್ಯಾತನವರ(48) ಕೊಲೆಗೈದ ಆರೋಪಿ ಎಂದರು.

2011ರಲ್ಲಿ ಖಾನಾಪುರ ತಾಲೂಕಿನ ನಂದಗಡ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಿಜಯ್ ಅವರ ತಂದೆ-ತಾಯಿ ಹತ್ಯೆಯಾಗಿತ್ತು. ಆ ಪ್ರಕರಣದಲ್ಲಿ ಕಲ್ಲಪ್ಪನ ಸಂಬಂಧಿಕರು ಭಾಗಿಯಾಗಿದ್ದರು. ಇದರಲ್ಲಿ ಶಿಕ್ಷೆಗೆ ಗುರಿಯಾದವರಿಗೆ ಜಾಮೀನು ಕೊಡಿಸಲು ಕಲ್ಲಪ‍್ಪ ಮತ್ತು ಭರತ್‌ ಪ್ರಯತ್ನಿಸಿದ್ದರು. ಇದು ವಿಜಯ್ ಸಿಟ್ಟಿಗೆ ಕಾರಣವಾಗಿತ್ತು. ಹಾಗಾಗಿ ಕೆಲ ದಿನಗಳ ಹಿಂದೆಯಷ್ಟೇ ಕಲ್ಲಪ್ಪನ ಮನೆಗೆ ಹೋಗಿ ವಿಜಯ್ ಗಲಾಟೆ ಕೂಡ ಮಾಡಿದ್ದ. ಇನ್ನು ಭಾನುವಾರ ಭರತ್ ಮತ್ತು ವಿಜಯ್ ಮಧ್ಯೆ ವಾಗ್ವಾದ ಆಗಿತ್ತು. ಇದಾದ ಅರ್ಧ ಗಂಟೆ ಬಳಿಕ ಕಲ್ಲಪ್ಪನ ಮನೆಗೆ ಹೋಗಿದ್ದ ವಿಜಯ್, ಮಾತುಕತೆಗೆ ಬರುವಂತೆ ಹೇಳಿದ್ದಾನೆ. ಇದೇ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಿದರು.

ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಜಯ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಕಲ್ಲಪ್ಪ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಕೊಲೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಎಸ್​ಪಿ ಡಾ ಭೀಮಾಶಂಕರ ಗುಳೇದ ತಿಳಿಸಿದರು.


Spread the love

About Laxminews 24x7

Check Also

ಭಾರತದಲ್ಲಿ ಅಗತ್ಯಕ್ಕಿಂತ ದುಪ್ಪಟ್ಟು ಆಹಾರ ಧಾನ್ಯ ಸಂಗ್ರಹವಿದೆ, ವದಂತಿಗೆ ಕಿವಿಗೊಡಬೇಡಿ- ಸಚಿವ ಜೋಶಿ

Spread the loveನವದೆಹಲಿ/ಹುಬ್ಬಳ್ಳಿ: “ದೇಶದಲ್ಲಿ ಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ ಎಂಬುದು ಶುದ್ಧ ಸುಳ್ಳು. ಯಾರೊಬ್ಬರೂ ಈ ಹುಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ