Breaking News

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರಿಗೆ ಗಗನ್ ಕಡೂರು ಕರೆತಂದು ಸ್ಥಳ ಮಹಜರು ನಡೆಸಿದ ಸಿಸಿಬಿ ಪೊಲೀಸರು

Spread the love

ಚಿಕ್ಕಮಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹಾಗೂ ಸ್ಥಳ ಮಹಜರಿಗಾಗಿ ಚಿಕ್ಕಮಗಳೂರಿಗೆ ಸಿಸಿಬಿ ಪೊಲೀಸರು ಆಗಮಿಸಿದ್ದರು. ಪ್ರಕರಣದ ಪ್ರಮುಖ ಆರೋಪಿಯಾದ ಗಗನ್ ಕಡೂರು ಹಾಗೂ ವಂಚನೆಗೊಳಗಾದ ಉದ್ಯಮಿ ಗೋವಿಂದ ಪೂಜಾರಿ ಸಮ್ಮುಖದಲ್ಲಿ ಚಿಕ್ಕಮಗಳೂರು ಹಾಗೂ ಕಡೂರಿನಲ್ಲಿ ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದರು.

ಚೈತ್ರಾ ಕುಂದಾಪುರ ಪ್ರಕರಣ ಬಗೆದಷ್ಟು ಅಂಶಗಳು ಬಯಲಾಗುತ್ತಿವೆ. ಈ ಘಟನೆ ನಡೆಯುವುದಕ್ಕೂ ಮೊದಲು ಆರೋಪಿಗಳು ಭೇಟಿ ನೀಡಿದ್ದ ಸ್ಥಳಕ್ಕೆ ಸಿಸಿಬಿ ಪೊಲೀಸರು ಆಗಮಿಸಿ ಮಹತ್ವದ ಮಾಹಿತಿಯನ್ನು ಕಲೆಹಾಕಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಸಿಸಿಬಿ ಪೊಲೀಸರು ಚಿಕ್ಕಮಗಳೂರು ಐಬಿಗೆ ಬಂದು ಸ್ಥಳ ಪರಿಶೀಲನೆ ನಡೆಸಿದ್ದು, ಎರಡನೇ ಮೀಟಿಂಗ್ ಚಿಕ್ಕಮಗಳೂರು ಐಬಿಯ ರೂಮ್ 5ರಲ್ಲಿ ನಡೆದಿತ್ತು. ಇದೇ ಕೊಠಡಿಯಲ್ಲಿ ನಕಲಿ ವಿಶ್ವನಾಥ್ ಜಿ ಅವರನ್ನು ಚೈತ್ರಾ ಆಯಂಡ್​ ಗ್ಯಾಂಗ್ ಗೋವಿಂದ ಪೂಜಾರಿಗೆ ಪರಿಚಯ ಮಾಡಿಕೊಟ್ಟಿತ್ತು.

ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಒಂದು ಗಂಟೆಗೂ ಅಧಿಕ ಕಾಲ ವಿಚಾರಣೆ ಹಾಗೂ ಸ್ಥಳ ಮಹಜರು ಕಾರ್ಯ ನಡೆಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸಿಸಿಬಿ ಪೊಲೀಸರು ಗೋವಿಂದ ಪೂಜಾರಿ ಹಾಗೂ ಗಗನ್ ಸಮ್ಮುಖದಲ್ಲಿ ಆ ದಿನ ನಡೆದ ಘಟನೆ ಹಾಗೂ ಮಾತುಕತೆ ಎಲ್ಲದರ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಪ್ರವಾಸಿ ಮಂದಿರದ ಇಬ್ಬರು ಸಿಬ್ಬಂದಿಗಳನ್ನೂ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಅವರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ. ಆ ದಿನ ರೂಂ ಪಡೆಯಲು ಯಾರೋ ಫೋನ್​ ಮಾಡಿದ್ದರು‌. ಫ್ರೆಶ್ ಅಪ್​ಗೆ ಬಂದಿರಬಹುದು ಎಂದು ಕೊಠಡಿ ನೀಡಿದ್ದೆವು ಎಂದು ಪ್ರವಾಸಿ ಮಂದಿರದ ಸಿಬ್ಬಂದಿಗಳು ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ