Breaking News

ಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಗೋಕಾಕ್ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ವಾಟ್ಸ್​ಆಯಪ್​ನಲ್ಲಿ ಚರ್ಚಿಸಿ ಬಳಿಕಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಗೋಕಾಕ್ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಬೆಣಚಿನಮರಡಿಯ ಖಿಲಾರಿ ಗ್ಯಾಂಗ್ ಮತ್ತು ಗೋಕಾಕ್​ ಎಸ್‌ಪಿ ಸರ್ಕಾರ ಗ್ಯಾಂಗ್‌ ಎಂಬ ಹೆಸರಿಟ್ಟುಕೊಂಡು ದರೋಡೆಗೆ ಇಳಿದಿದ್ದ ಗೋಕಾಕ್​ ತಾಲೂಕಿನ ಬೆಣಚಿನಮರಡಿಯ ದುರ್ಗಪ್ಪ ವಡ್ಡರ, ನಾಗಪ್ಪ ಮಾದರ, ಯಲ್ಲಪ್ಪ ಗೀಸನಿಂಗವ್ವಗೋಳ, ಕೃಷ್ಣಾ ಪೂಜೇರಿ, ರಾಮಸಿದ್ಧ ತಪಸಿ, ಬೀರಸಿದ್ಧ ಗುಂಡಿ, ಉದ್ದಪ್ಪ ಖಿಲಾರಿ, ಗೋಕಾಕ್​ನ ಪರಶುರಾಮ ಗೊಂಧಳಿ ಹಾಗೂ ಆಕಾಶ ತಳವಾರ ಬಂಧಿತರು.

ಸಾಮಾನ್ಯವಾಗಿ ವಾಟ್ಸ್​ಆಯಪ್ ಗ್ರೂಪ್​ಗಳನ್ನು ತಮ್ಮ ಕೆಲಸ ಸುಗಮಗೊಳಿಸಲು, ಸಂದೇಶ ಮತ್ತು ಮಾಹಿತಿಯನ್ನು ಏಕಕಾಲಕ್ಕೆ ಹೆಚ್ಚು ಜನರಿಗೆ ತಲುಪುವ ಉದ್ದೇಶಕ್ಕೆ ಬಳಸುತ್ತಾರೆ. ಆದರೆ ಈ ಆರೋಪಿಗಳು ಡಕಾಯಿತಿಗೆ ಬಳಸಿರುವ ಸಂಗತಿ ಪೊಲೀಸರ ತನಿಖೆಯಿಂದ ಬಯಲಾಗಿದೆ. ವಾಟ್ಸ್​ಆಯಪ್​​ನಲ್ಲಿ ಯಾವ ರೀತಿ ದರೋಡೆ ಮಾಡಬೇಕು?, ಎಲ್ಲಿ ಮಾಡಬೇಕು? ಎಂಬ ವಿಚಾರಗಳನ್ನು ಚರ್ಚಿಸಿ ಬಳಿಕ ಸಂಚು ರೂಪಿಸುತ್ತಿದ್ದರಂತೆ. ಅಲ್ಲದೇ ತಮ್ಮ ತಮ್ಮಲ್ಲೆ ಗ್ಯಾಂಗ್​ಗಳನ್ನು ಮಾಡಿಕೊಂಡು ಸುಲಿಗೆ ಮಾಡುತ್ತಾ, ಜನರಲ್ಲಿ ಭೀತಿ ಹುಟ್ಟಿಸಿದ್ದರು.

ಸೆ.14ರಂದು ಗೋಕಾಕ್​ನಿಂದ ಕನಸಗೇರಿಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ ಮಹಿಳೆಯನ್ನು ಅಡ್ಡಗಟ್ಟಿದ್ದ ಈ ಗ್ಯಾಂಗ್ ಅವರ ಕೊರಳಲ್ಲಿದ್ದ ಚಿನ್ನದ ಸರ ಮತ್ತು ಉಂಗುರ ಕಿತ್ತುಕೊಂಡು ಪರಾರಿಯಾಗಿದ್ದರು. ಗೋಕಾಕ್​ ಗ್ರಾಮೀಣ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಅಲ್ಲದೇ ಗೋಕಾಕ್​ ನಗರ, ಗ್ರಾಮೀಣ, ಅಂಕಲಗಿ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ದರೋಡೆ, ಸುಲಿಗೆ, ದ್ವಿಚಕ್ರ ವಾಹನ ಮತ್ತು ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಇವುಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಹಿರಿಯ ಪೊಲೀಸರು ತನಿಖೆಗಾಗಿ ಗೋಕಾಕ್​ ಸಿಪಿಐ ಗೋಪಾಲ ರಾಠೋಡ ನೇತೃತ್ವದಲ್ಲಿ ತಂಡ ರಚಿಸಿದ್ದರು. ಕಾರ್ಯಾಚರಣೆಗಿಳಿದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, “ಈ ಗ್ಯಾಂಗ್ ಸದಸ್ಯರು ದರೋಡೆ, ಸುಲಿಗೆ ಮಾಡುತ್ತಿದ್ದರು. ಇದಕ್ಕಾಗಿ ವಾಟ್ಸ್‌ಆಯಪ್‌ ಗ್ರೂಪ್‌ ಕೂಡ ರಚಿಸಿಕೊಂಡು, ವ್ಯವಸ್ಥಿತವಾಗಿ ದರೋಡೆ ಮಾಡಲು ಸಂಚು ಹೆಣೆಯುತ್ತಿದ್ದರು. ಡಿವೈಎಸ್‌ಪಿ ಡಿ. ಹೆಚ್‌.ಮುಲ್ಲಾ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಗೋಕಾಕ್​ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್​ ಸಿಬ್ಬಂದಿಗೆ ಅಭಿನಂದನೆಗಳು. ಈ ಆರೋಪಿಗಳು ಮತ್ತಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆಯಿದೆ ಆ ಬಗ್ಗೆಯೂ ತನಿಖೆ ನಡೆಸುತ್ತೇವೆ” ಎಂದರು.


Spread the love

About Laxminews 24x7

Check Also

ಸುವರ್ಣಸೌಧದಲ್ಲಿ ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ

Spread the loveಬೆಳಗಾವಿ: ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ