ಬಳ್ಳಾರಿ: ಬಸ್​ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 40ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ಬಳ್ಳಾರಿ: ಕೆಎಸ್‍ಆರ್​ಟಿಸಿ ಬಸ್ ರಸ್ತೆ ಬದಿ ಪಲ್ಟಿ ಹೊಡೆದು 40ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ರಸ್ತೆಯಲ್ಲಿ ಇಂದು ಸಂಭವಿಸಿದೆ.

 

ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್​ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಗಿರೆನಹಳ್ಳಿ ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್​ನಲ್ಲಿ ಶಾಲಾ, ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಕಂಡಕ್ಟರ್​ ಕೈ ಮುರಿದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಭೇಟಿ ನೀಡಿ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.


Spread the love

About Laxminews 24x7

Check Also

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

Spread the loveಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ