Breaking News

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಇಂದು ನಗರದ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿತು. ಅಭಿನವ ಹಾಲಶ್ರಿ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ‌ ಸಲ್ಲಿಸಿದರು. ಸರ್ಕಾರಿ ವಕೀಲರಿಗೆ ಸೆಪ್ಟೆಂಬರ್ 29ರಂದು ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಜಾಮೀನು ಅರ್ಜಿಯನ್ನು ಕೋರ್ಟ್‌ ಮುಂದೂಡಿತು. ಹೀಗಾಗಿ, ಅಲ್ಲಿಯವರೆಗೂ ಆರೋಪಿಯನ್ನು ನ್ಯಾಯಾಲಯ ಪೊಲೀಸರ ವಶಕ್ಕೆ ಒಪ್ಪಿಸಿದೆ. ನಿನ್ನೆಯಿಂದ ಸ್ಚಾಮೀಜಿಯನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಒಂದಿಷ್ಟು ಮಹತ್ವದ ವಿಚಾರಗಳನ್ನು ಅವರು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ 10:30ರ ವೇಳೆಗೆ ಸ್ವಾಮೀಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಚಂದ್ರಾ ಲೇಔಟ್ ಬಳಿಯ ಮನೆಯೊಂದರಲ್ಲಿ ಸ್ವಾಮೀಜಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅಲ್ಲಿಗೆ ಕರೆದೊಯ್ದು ಸಿಸಿಬಿ ಅಧಿಕಾರಿಗಳು ಸ್ಥಳ ಮಹಜರು ಪ್ರಕ್ರಿಯೆ ಮಾಡಲಿದ್ದಾರೆ. ಪಡೆದ ಹಣವನ್ನು ಮೈಸೂರಿನಲ್ಲಿ ಇರಿಟ್ಟಿರುವ ಮಾಹಿತಿಯಿದ್ದು, ನಂತರ ಮೈಸೂರಿಗೂ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ 6 ಆರೋಪಿಗಳ ಬಂಧನವಾಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದರು. ತಲೆಮರೆಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪಿ ಮೈಸೂರಿನಿಂದ ಒಡಿಶಾಗೆ ವಿವಿಧ ಮಾರ್ಗಗಳಲ್ಲಿ ತೆರಳಿ, ಭುವನೇಶ್ವರದಿಂದ ಭೋದ್ ಗಯಾಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಡಿಶಾ ಕಟಕ್ ಬಳಿ ಬಂಧಿಸಲಾಗಿದೆ.

Spread the love

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಇಂದು ನಗರದ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಿದರು.

ನ್ಯಾಯಾಲಯವು ಆರೋಪಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿತು.

ಅಭಿನವ ಹಾಲಶ್ರಿ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ‌ ಸಲ್ಲಿಸಿದರು. ಸರ್ಕಾರಿ ವಕೀಲರಿಗೆ ಸೆಪ್ಟೆಂಬರ್ 29ರಂದು ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಜಾಮೀನು ಅರ್ಜಿಯನ್ನು ಕೋರ್ಟ್‌ ಮುಂದೂಡಿತು. ಹೀಗಾಗಿ, ಅಲ್ಲಿಯವರೆಗೂ ಆರೋಪಿಯನ್ನು ನ್ಯಾಯಾಲಯ ಪೊಲೀಸರ ವಶಕ್ಕೆ ಒಪ್ಪಿಸಿದೆ.

ನಿನ್ನೆಯಿಂದ ಸ್ಚಾಮೀಜಿಯನ್ನು ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಒಂದಿಷ್ಟು ಮಹತ್ವದ ವಿಚಾರಗಳನ್ನು ಅವರು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ 10:30ರ ವೇಳೆಗೆ ಸ್ವಾಮೀಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಚಂದ್ರಾ ಲೇಔಟ್ ಬಳಿಯ ಮನೆಯೊಂದರಲ್ಲಿ ಸ್ವಾಮೀಜಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅಲ್ಲಿಗೆ ಕರೆದೊಯ್ದು ಸಿಸಿಬಿ ಅಧಿಕಾರಿಗಳು ಸ್ಥಳ ಮಹಜರು ಪ್ರಕ್ರಿಯೆ ಮಾಡಲಿದ್ದಾರೆ. ಪಡೆದ ಹಣವನ್ನು ಮೈಸೂರಿನಲ್ಲಿ ಇರಿಟ್ಟಿರುವ ಮಾಹಿತಿಯಿದ್ದು, ನಂತರ ಮೈಸೂರಿಗೂ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ 6 ಆರೋಪಿಗಳ ಬಂಧನವಾಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದರು. ತಲೆಮರೆಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪಿ ಮೈಸೂರಿನಿಂದ ಒಡಿಶಾಗೆ ವಿವಿಧ ಮಾರ್ಗಗಳಲ್ಲಿ ತೆರಳಿ, ಭುವನೇಶ್ವರದಿಂದ ಭೋದ್ ಗಯಾಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಡಿಶಾ ಕಟಕ್ ಬಳಿ ಬಂಧಿಸಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ