Breaking News

ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಪಾಗಲ್ ಪ್ರೇಮಿ

Spread the love

ಕೋಲಾರ: ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್​ನ ಚಾಂಪಿಯನ್ ರೀಫ್ ನಗರದಲ್ಲಿರುವ ಖಾಸಗಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದಿದೆ.

 

ದ್ವಿತೀಯ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ಪ್ರೀತಮ್ ಪ್ರಭು ಎಂಬ ಯುವಕ, ಪ್ರಥಮ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದರಂತೆ ಇಂದು ಸಹ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ ಒತ್ತಾಯಿಸಿದ್ದ.

ಆದರೆ ವಿದ್ಯಾರ್ಥಿನಿ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಯುವಕ ವಿದ್ಯಾರ್ಥಿನಿಯ ಕುತ್ತಿಗೆಗೆ ಬ್ಲೇಡ್ ನಿಂದ ಇರಿದಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂಬ ಮಾಹಿತಿ ಸಿಕ್ಕಿದೆ. ಹಲ್ಲೆಗೊಳಗಾಗಿರುವ ವಿದ್ಯಾರ್ಥಿನಿ ಮೂಲತಃ ಬೆಂಗಳೂರಿನವಳಾಗಿದ್ದು, ವಿದ್ಯಾಭ್ಯಾಕ್ಕಾಗಿ ಕೆಜಿಎಫ್​ನಲ್ಲಿರುವ ತನ್ನ ಚಿಕ್ಕಪ್ಪನ ಮನೆಯಲ್ಲಿ ನೆಲೆಸಿದ್ದಳು. ಘಟನಾ ಸ್ಥಳಕ್ಕೆ ಉರಿಗಾಂ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ