ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

Spread the love

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ.

ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರೈತರು, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಸ್ಯಾಂಡಲ್​ವುಡ್ ನಟರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದು ನೀರು ಹರಿಸುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅನ್ನದಾತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಅನ್ನದಾತರ ಹೋರಾಟಕ್ಕೆ ಬೆಂಬಲ ಸೂಚಿಸದೇ, ಮೌನವಾಗಿದ್ದಾರೆ ಎಂದು ಚಿತ್ರರಂಗದವರ ವಿರುದ್ಧ ರೈತರು ವಾಗ್ದಾಳಿ ನಡೆಸಿದ್ದಾರೆ.

ಇನ್ನೊಂದೆಡೆ, ಸಾಮಾಜಿಕ ಜಾಲತಾಣಗಳಲ್ಲೂ​ ನಟರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕಾವೇರಿ ಬಗ್ಗೆ ಧ್ವನಿ ಎತ್ತದ ನಟರಿಗೆ ಧಿಕ್ಕಾರದ ಪೋಸ್ಟ್ ಹಾಕುತ್ತಿದ್ದಾರೆ. ನಮ್ಮಿಂದ ನಟರೇ ಹೊರತು, ನಟರಿಂದ ನಾವಲ್ಲ ಎಂಬ ಸತ್ಯ ಅರಿಯಬೇಕು ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ರೈತ ಮುಖಂಡ ನಂಜುಂಡೇಗೌಡ, “ಪ್ರಚಾರ ತೆಗೆದುಕೊಳ್ಳಲು, ರಾಜಕೀಯ ಪ್ರಚಾರ ಮಾಡಲು ಮಾತ್ರ ಮಂಡ್ಯಕ್ಕೆ ನಟರು ಬರುತ್ತಾರೆ. ಕಾವೇರಿ ವಿಚಾರದಲ್ಲಿ ಮಾತ್ರ ಮಾತನಾಡುತ್ತಿಲ್ಲ. ಅವರಿಗೆ ಹಣ ಮಾತ್ರ ಬೇಕಿದೆ” ಎಂದು ಕಿಡಿ ಕಾರಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ