Breaking News

ಒಪಿಎಸ್ ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಶಿಕ್ಷಕರಿಂದ ಬೈಕ್ ರ್ಯಾಲಿ

Spread the love

ಬೆಳಗಾವಿ: ಹೊಸ ಪಿಂಚಣಿ ಬದಲಾಗಿ ಹಳೆ ಪಿಂಚಣಿ ಜಾರಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಶಿಕ್ಷಕರು ಬೈಕ್ ರ್ಯಾಲಿ ನಡೆಸಿದರು. ಐದು ವರ್ಷ ಜನಪ್ರತಿನಿಧಿಗಳಾಗುವ ಶಾಸಕರು, ಸಂಸದರಿಗೆ ಇರುವ ಪಿಂಚಣಿ ನಮಗೆ ಯಾಕಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಖಿಲ ಭಾರತ ಶಿಕ್ಷಕರ ಫೆಡರೇಶನ್​​ದಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿದ್ದು, ಬುಧವಾರ ಬೆಳಗಾವಿಗೆ ಯಾತ್ರೆಯು ಆಗಮಿಸಿತು. ಈ ವೇಳೆ ಸಾವಿರಾರು ಶಿಕ್ಷಕರು ಈ ಯಾತ್ರೆಯಲ್ಲಿ ಭಾಗಿಯಾಗಿ, ರಕ್ತ ಕೊಟ್ಟೇವು ಪಿಂಚಣಿ ಬಿಡೆವು, ನಿಶ್ಚಿತ ಪಿಂಚಣಿ ನಮ್ಮ ಹಕ್ಕು, ಪಿಂಚಣಿ ಭಿಕ್ಷೆ ಅಲ್ಲ.. ನಮ್ಮ ಹಕ್ಕು, ಎನ್ ಪಿ ಎಸ್ ತೊಲಗಲಿ ಎಂದು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು‌.

ಇದೇ ವೇಳೆ ಈಟಿವಿ ಭಾರತ್ ಜತೆ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಎಸ್ ಡಿ ಗಂಗಣ್ಣವರ, 2006ರಿಂದ ಜಾರಿಗೆ ತಂದಿರುವ ಎನ್ ಪಿ‌ ಎಸ್ ಮಾರಣಾಂತಿಕ‌ ಕಾಯ್ದೆ ಜಾರಿಗೆ ತಂದಿದೆ. ವೃದ್ಧಾಪ್ಯದಲ್ಲಿ ವರವಾಗಿದ್ದ ಪಿಂಚಣಿಯನ್ನು ಕಿತ್ತುಕೊಂಡು ಸರ್ಕಾರಿ ನೌಕರರನ್ನು ಸರ್ಕಾರ ಬೀದಿಗೆ ತರುವ ಕೆಲಸ ಮಾಡಿದೆ ಎಂದು ಆರೋಪಿಸಿದರು.

ವಿಧಾನಸಭೆ ಚುನಾವಣೆ ಮುನ್ನ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ 16 ದಿನ ನಿರಂತರ ಹೋರಾಟ ಮಾಡಿದರೂ ಅಂದಿನ ಸರ್ಕಾರ ನಮಗೆ ಕಿಂಚಿತ್ತು ಬೆಲೆ ಕೊಡಲಿಲ್ಲ. ಈಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತಾವು ಕೊಟ್ಟ ಭರವಸೆಯಂತೆ ಎನ್ ಪಿ ಎಸ್ ರದ್ದುಪಡಿಸಿ ಒಪಿಎಸ್ ಜಾರಿಗೆ ತರಬೇಕು. ಅದೇ ರೀತಿ ನೂತನ ಶಿಕ್ಷಣ ನೀತಿಯಲ್ಲಿನ ಲೋಪದೋಷಗಳನ್ನು ಕೈ ಬಿಡುಬುದು, ಅತಿಥಿ ಶಿಕ್ಷಕರ ಬದಲಾಗಿ ಕಾಯಂ ಶಿಕ್ಷಕರ ನೇಮಕಾತಿ, ರಾಷ್ಟ್ರದ ಎಲ್ಲಾ ನೌಕರರಿಗೆ ಭೇದ-ಭಾವವಿಲ್ಲದೆ ಏಕರೂಪದ ವೇತನ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಶಿಕ್ಷಕಿ ಲೀನಾ ಗಾಣಗಿ ಮಾತನಾಡಿ, 2007ರಿಂದ ಆಚೆಗೆ ನೇಮಕಾತಿ ಆಗಿರುವ ನಮಗೆಲ್ಲಾ ಪಿಂಚಣಿ ಇಲ್ಲ. ಇದರಿಂದ ನಿವೃತ್ತಿ ಬಳಿಕ ಸಂಧ್ಯಾ ಕಾಲದ ನಮ್ಮ ಜೀವನ ತುಂಬಾ ಕಷ್ಟಕರವಾಗಲಿದೆ. ನಮ್ಮ ಒಪಿಎಸ್ ಜಾರಿಗೆ ಬರೋವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ