Breaking News

ಕೈ, ಕಾಲು ಕಟ್ಟಿ ಮನೆ ದರೋಡೆ; ₹1 ಕೋಟಿ ಮೌಲ್ಯದ ಚಿನ್ನ, ನಗದು ದೋಚಿ ದುಷ್ಕರ್ಮಿಗಳು ಪರಾರಿ

Spread the love

ಹುಬ್ಬಳ್ಳಿ: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ದರೋಡೆಕೋರರು ಹುಬ್ಬಳ್ಳಿಯಲ್ಲಿ ದುಷ್ಕೃತ್ಯ ಎಸಗಿದ್ದಾರೆ. ಅಂದಾಜು ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ.

ಇಲ್ಲಿನ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ತಡರಾತ್ರಿ ಘಟನೆ ನಡೆದಿದೆ.

ವಿದ್ಯಾಮಂದಿರ ಬುಕ್ ಡಿಪೋ ಮಾಲೀಕ ಉಲ್ಲಾಸ ದೊಡ್ಡಮನಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಕಿಟಕಿಯ ಕಬ್ಬಿಣದ ಗ್ರಿಲ್ ತುಂಡರಿಸಿ ಮನೆಯೊಳಗೆ ನುಗ್ಗಿದ ದರೋಡೆಕೋರರು, ಮನೆಯಲ್ಲಿದ್ದವರ ಕೈ, ಕಾಲು ಕಟ್ಟಿ ಹಾಕಿ ನಗ, ನಾಣ್ಯ ದೋಚಿ ಪರಾರಿಯಾಗಿದ್ದಾರೆ.

ಸುಮಾರು 8 ಜನರಿದ್ದ ಡಕಾಯಿತರ ತಂಡ ಕೃತ್ಯ ಎಸಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗೋಕುಲ ರೋಡ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಕಿಟಕಿ ಮುರಿದು ಒಳ ನುಗ್ಗಿ ಕೃತ್ಯ: ಖದೀಮರು ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್​ಗಳನ್ನು ಮುರಿದು ಒಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿದ್ದವರನ್ನು ಹೆದರಿಸಿ ಅವರ ಕೈ, ಕಾಲು ಕಟ್ಟಿ ಹಾಕಿದ್ದಾರೆ. ನಂತರ ಮನೆಯೊಳಗಿನ ಚಿನ್ನಾಭರಣ ಮತ್ತು ನಗದು ದೋಚಿಸಿ ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಮೇ 13 ರಿಂದ ಮೇ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ

Spread the love ಧಾರವಾಡ – ಮಲಪ್ರಭಾ ಬಲದಂಡೆ ಕಾಲುವೆ ಅಡಿ ಬರುವ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಅಣ್ಣಿಗೇರಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ