Breaking News

ಮೈಸೂರು ವಿವಿ ಕುಲಪತಿಯಾಗಿ ಲೋಕ್​ನಾಥ್ ಮುಂದುವರಿಕೆಗೆ ಹೈಕೋರ್ಟ್ ಸೂಚನೆ

Spread the love

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿ ಆಗಿರುವ ಪ್ರೊ.

ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ರಿಲೀಫ್​ ನೀಡಿರುವ ಹೈಕೋರ್ಟ್​ ಮುಂದಿನ ಆದೇಶದವರೆಗೆ ಕುಲಪತಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದೆ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು ಖಾಲಿಯಾಗುವಂತಿಲ್ಲ. ಈ ಹಿನ್ನೆಲೆ ಹುದ್ದೆಯಲ್ಲಿ ಮುದುವರೆಯಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ಈ ಸಂಬಂಧ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ.

ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಪ್ರೊ ಶರತ್ ಅನಂತಮೂರ್ತಿ ಮತ್ತು ಡಾ ಜಿ ವೆಂಕಟೇಶ್‌ ಕುಮಾರ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಏಕ ಸದಸ್ಯ ಪೀಠ ಪುರಸ್ಕರಿಸಿ, ಲೋಕನಾಥ್​ ಅವರ ನೇಮಕ ಆದೇಶವನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಲೋಕನಾಥ್​ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ್​ ಅವರಿದ್ದ ನ್ಯಾಯಪೀಠವು ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಈ ಆದೇಶದಂತೆ ಲೋಕನಾಥ್​ ಅವರು ವಿವಿ ಕುಲಪತಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಾಗಿದ್ದಾರೆ ಎಂಬುದಾಗಿ ಅರ್ಥವಲ್ಲ ಎಂದು ಪೀಠ ತನ್ನ ಆದೇಶದಲ್ಲಿ ಸ್ಪಷ್ಟ ಪಡಿಸಿದೆ.

ಪ್ರಕರಣದ ಹಿನ್ನೆಲೆ ಏನು ? ಶೋಧನಾ ಸಮಿತಿಯು ಪ್ರೊ. ಎನ್ ಕೆ ಲೋಕನಾಥ್, ಪ್ರೊ. ಶರತ್ ಅನಂತಮೂರ್ತಿ, ಪ್ರೊ. ಡಿ ಎಸ್‌ ಗುರು ಅವರ ಹೆಸರುಗಳನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು 2023ರ ಮಾ.23ರಂದು ಪ್ರೊ. ಎನ್ ಕೆ ಲೋಕನಾಥ್ ಅವರನ್ನು ನಾಲ್ಕು ವರ್ಷಗಳ ಅವಧಿಗೆ ಅಥವಾ 67 ವರ್ಷಗಳಾಗುವವರೆಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ಆದೇಶಿಸಿತ್ತು. ಅದನ್ನು ಪ್ರಶ್ನಿಸಿದ್ದ ಅರ್ಜಿದಾರರು, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯನ್ವಯ ನಿರ್ದಿಷ್ಟ ಅರ್ಹತೆ ಇಲ್ಲದಿದ್ದರೂ ನಿಯಮಾವಳಿ ಉಲ್ಲಂಘಿಸಿ, ಪ್ರೋ.ಲೋಕನಾಥ್ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ.

ಮೈಸೂರಿನ ಜಯಲಕ್ಷ್ಮೀಪುರಂ ನಿವಾಸಿ ಡಿ ವಿ ಶಶಿಧರ್ ಮತ್ತಿತರರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಲೋಕನಾಥ್ ಮತ್ತಿತರರ ವಿರುದ್ಧ ಆಸ್ತಿ ಒತ್ತುವರಿ ಸಂಬಂಧ 2020ರ ನ.4ರಂದು ವಂಚನೆ ಪ್ರಕರಣ ದಾಖಲಿಸಿದ್ದರು. ಆ ಕುರಿತ ಪ್ರಕರಣ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಬಾಕಿ ಇದೆ ಎಂದು ಆಕ್ಷೇಪಿಸಿದ್ದರು.

ಕುಲಪತಿಯಾಗಿ ನೇಮಕ ಆಗುವವರ ವಿರುದ್ಧ ಯಾವುದೇ ಕ್ರಿಮಿನಲ್‌ ಪ್ರಕರಣ ಬಾಕಿ ಇರಬಾರದು. ಆದರೆ ಕುಲಪತಿಯಾಗಿ ನೇಮಕಗೊಂಡಿರುವ ಲೋಕನಾಥ್ ವಿರುದ್ಧ ಕ್ರಿಮಿನಲ್ ಪ್ರಕರಣ ಬಾಕಿ ಇದೆ. ಆದರೆ ಆ ವಿಷಯವನ್ನು ಅವರು ಮರೆಮಾಚಿದ್ದಾರೆ. ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ವಿರುದ್ಧವಾಗಿ ಹಾಗೂ ನಿಯಮಗಳನ್ನು ಗಾಳಿಗೆ ತೂರಿ ಲೋಕನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ