Breaking News

ನಾನು 1966ರಲ್ಲಿ ಪ್ರಯತ್ನಿಸಿ ವಿಫಲನಾಗಿದ್ದೆ’: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ದೇವೇಗೌಡ ಮೆಚ್ಚುಗೆ

Spread the love

ನವದೆಹಲಿ/ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವನ್ನು ಸ್ವಾಗತಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, “ಇದು ದೇಶದ ಮಹಿಳೆಯ ಹಿತದೃಷ್ಟಿಯಿಂದ ಕೈಗೊಂಡ ಸಮಯೋಚಿತ ನಿರ್ಧಾರ” ಎಂದರು.

ಶುಕ್ರವಾರ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಕೆಲವೇ ಹೊತ್ತಲ್ಲಿ ನವದೆಹಲಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿ ದೊರಕಿದ್ದು, ಇದು ಅವರ ಸಮಯ” ಎಂದು ಬಣ್ಣಿಸಿದರು.

“ನಾನು ಪ್ರಧಾನಿಯಾಗಿದ್ದಾಗ 1966ರಲ್ಲಿ ಈ ಮಸೂದೆಯನ್ನು ಮತ್ತೆ ತಂದಿದ್ದೆ. ಆದರೆ ಅಂಗೀಕಾರಗೊಳಿಸುವಲ್ಲಿ ವಿಫಲನಾಗಿದ್ದೆ. ನಂತರ ಪ್ರಧಾನಿಯಾಗಿದ್ದ ಮನಮೋಹನ್​ ಸಿಂಗ್​ ಅವರ ಅವಧಿಯಲ್ಲಿ ಈ ವಿಷಯದ ಎರಡು ಬಾರಿ ಪ್ರಸ್ತಾಪವಾಗಿತ್ತು. ಆದರೆ ಎರಡು ಬಾರಿಯೂ ಅವರ ಸರ್ಕಾರ ಈ ವಿಷಯದಲ್ಲಿ ಬಹುಮತ ಪಡೆಯಲಿಲ್ಲ. ಆದರೆ ನೀವು ಬಿಜೆಪಿ ಸರ್ಕಾರ ಅದೃಷ್ಟವಂತರು. ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಸಿಕ್ಕಿದೆ” ಎಂದು ಹೇಳಿದರು.

ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ, ನಗುತ್ತಲೇ ಪ್ರತಿಕ್ರಿಯಿಸಲು ನಿರಾಕರಿಸಿದರು.

ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳೆಡರ ಮಧ್ಯೆ ವಿವಾದ ಸೃಷ್ಟಿಸಿರುವ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾತನಾಡುತ್ತಾ, “ಈ ಬಗ್ಗೆ ನಾನು ಸದನದಲ್ಲೇ ಹೇಳಿದ್ದೇನೆ. ತಮಿಳುನಾಡು ಅಥವಾ ಕರ್ನಾಟಕಕ್ಕೆ ಸೇರದ ಐವರು ಸದಸ್ಯರನ್ನು ಕಳುಹಿಸಲಿ. ಅಲ್ಲಿ ಬಂದು ಪರಿಸ್ಥಿತಿ, ಬೆಳೆ ಸ್ಥಿತಿ, ಸಂಗ್ರಹಣೆಯ ಬಗ್ಗೆ ಅಧ್ಯಯನ ಮಾಡಲಿ” ಎಂದು ಹೇಳಿದರು.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ