Breaking News

ಪ್ರಮೋದ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ : ಗಡಿಪಾರಿಗೆ ಆಗ್ರಹಿಸಿ ಪೊಲೀಸ್ ಕಮೀಷನರ್ ಗೆ ದೂರು

Spread the love

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್​​ ಮೈದಾನಕ್ಕೆ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಮಾಡಲಾಗಿದ್ದು, ಗಣೇಶೋತ್ಸವ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ, ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಅಂತ ವಾಗ್ದಾಳಿ ಮಾಡಿದ್ದರು.

ಮೂರು ದಿನ ಯಾವುದೇ ಗೊಂದಲ್ಲ ಇಲ್ಲದೆ ಗಣೇಶ ಪ್ರತಿಷ್ಠಾಪನೆಯಾಗಿದೆ. ಹಿಂದೂ ಸಮಾಜ ಶಾಂತಿಯಿಂದ ಆಚರೆಣೆ ಮಾಡಿದೆ. ಸದ್ಯ ಈದ್ಗಾ ಮೈದಾನ ಶುದ್ದಿಯಾಗಿದೆ. ಗಣೇಶ ಉತ್ಸವಕ್ಕೆ ವಿರೋಧಿ ಮಾಡಿದವರು ದೇಶ ವಿರೋಧಿಗಳು, ಅಧರ್ಮಿಯರು. ನಾವು ಅದನ್ನು ಮೆಟ್ಟಿ ನಿಂತು ಆಚರಣೆ ಮಾಡಿದ್ದೇವೆ ಎಂದು ಹೇಳಿದ್ದರು.

ಈ ಕುರಿತು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಸಹ ಪ್ರತಿಕ್ರಿಯಿಸಿದ್ದು,
ಈಗಾಗಲೇ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮಹಾನಗರ ಪಾಲಿಕೆ 8 ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ಎಂಬುವವರು ದೂರು ನೀಡಿದ್ದಾರೆ. ನಾನು ಸಹ ಗಡಿಪಾರು ಸಲುವಾಗಿ ಚಿಂತನೆ ನಡೆಸಿದ್ದೇವೆ ಎಂದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಸೂಕ್ತ ಕ್ರಮ ಜರುಗಿಸಲಾಗುವುದು. ಪ್ರಚೋದನಾಕಾರಿ ಹೇಳಿಕೆ ಹಿನ್ನೆಲೆಯಲ್ಲಿ ನಿನ್ನೆಯೇ ಸ್ವಯಂಪ್ರೇರಿತವಾಗಿ ದೂರು ದಾಖಲು ಮಾಡಲಾಗಿತ್ತು. ಬಳಿಕ ಅಂಜುಮನ್ ಸಂಸ್ಥೆಯಿಂದಲೂ ಸಹ ದೂರು ನೀಡಲಾಗಿದೆ. ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಮನವಿ ಕೊಟ್ಟಿದ್ದು, ಈ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ