ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಪ್ರಕಟಿಸಿದೆ.
ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವದ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದೆ. ನವೆಂಬರ್ 1 ರಿಂದಲೇ ಪೂರ್ವಾನ್ವಯವಾಗಿ ಪರಿಷ್ಕೃತ ದರ ಜಾರಿಗೆ ಬರಲಿದೆ. ಐದು ತಿಂಗಳ ಮಟ್ಟಿಗೆ ಹೊಸ ಪರಿಷ್ಕೃತ ದರ ಜಾರಿಯಲ್ಲಿ ಇರಲಿದೆ
ಜನವರಿಯಲ್ಲೇ ವಿದ್ಯುತ್ ಸರಬರಾಜು ಕಂಪನಿಗಳು ದರ ಏರಿಕೆಗೆ ಪ್ರಸ್ತಾಪ ಸಲ್ಲಿಸಿದ್ದವು. ಮಾರ್ಚ್ ನಲ್ಲಿ ವಿದ್ಯುತ್ ದರ ಏರಿಕೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಸರ್ಕಾರ ದರ ಏರಿಕೆಯನ್ನು ತಡೆ ಹಿಡಿದಿತ್ತು.
ಲಾಕ್‌ಡೌನ್ ತೆರವಾಗಿ ಆರ್ಥಿಕ ಚಟುವಟಿಕೆಗಳು ಆರಂಭಗೊಂಡರೂ ವಿದ್ಯುತ್ ದರವನ್ನು ಸರ್ಕಾರ ಏರಿಸಿರಲಿಲ್ಲ. ಈಗ ರಾಜರಾಜೇಶ್ವರಿ ನಗರ, ಶಿರಾ ಉಪ ಚುನಾವಣೆ ಮುಗಿದ ಬಳಿಕ ದರವನ್ನು ಏರಿಸಿ ಆದೇಶ ಪ್ರಕಟಿಸಿದೆ.
Laxmi News 24×7