ಕಾವೇರಿ ನದಿ ನೀರಿನ ವಿಚಾರಕ್ಕೆ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಿರುವುದಕ್ಕೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾವೇರಿ ನೀರು ಹರಿಸುವ ಸಂಬಂಧ ಬಗೆಹರಿಸಲು ಸಿದ್ದರಾಮಯ್ಯ ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಗಮನಕ್ಕೆ ತಂದರು
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಇಂದು ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು ಹಾಗೂ ಸಂಸದರೊಂದಿಗೆ ಭೇಟಿ ಮಾಡಿ ಚರ್ಚಿಸಿದರು.
ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಶೋಭಾ ಕರಂದ್ಲಾಜೆ, ರಾಜ್ಯದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್,